ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಖಾಸಗಿ ಕಾಲೇಜುಗಳು ಶುಲ್ಕು ನಿಗದಿಪಡಿಸುವ ವೇಳೆ ಆರ್ಥಿಕವಾಗಿ ಹಿಂದುಳಿದಿರುವವರನ್ನೂ ಗಮನದಲ್ಲಿರಿಸಿಕೊಳ್ಳಬೇಕು ಎಂದು ಸಹ್ಯಾದ್ರಿ ಕರಿಯರ್ ಅಕಾಡೆಮಿ ನಿರ್ದೇಶಕ ಹಾಗೂ ಜಿಲ್ಲಾ ಮರಾಠ ಪರಿಷತ್ ಅಧ್ಯಕ್ಷ ಸಿದ್ದೋಜಿರಾವ್ ಮದನೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಇತ್ತೀಚೆಗೆ ಅಪೂರ್ವ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ರಮೇಶ್ ಧವಳೆ ಸೇರಿದಂತೆ ಕೆಲವರೊಂದಿಗೆ ಸಮಾಲೋಚನೆ ನಡೆಸಿದ ಅವರು ಈ ಮನವಿ ಮಾಡಿದ್ದಾರೆ.
ಕೊರೋನಾ ಸಂಕಷ್ಟದಲ್ಲಿ ಬಹಳಷ್ಟು ಮಂದಿ ಆರ್ಥಿಕವಾಗಿ ಬಳಲಿದ್ದಾರೆ. ಇಂತಹ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳು ಶುಲ್ಕ ನಿಗದಿಪಡಿಸುವ ವೇಳೆ ಅರ್ಥಿಕವಾಗಿ ಹಿಂದುಳಿದಿರುವವರನ್ನೂ ಸಹ ಗಮನದಲ್ಲಿರಿಸಿಕೊಳ್ಳಬೇಕು. ಈ ಮೂಲಕ ಖಾಸಗಿ ಕಾಲೇಜುಗಳಲ್ಲಿ ಜನಸಾಮಾನ್ಯರಿಗೂ ಸಹ ಶಿಕ್ಷಣ ದೊರೆಯುವಂತಾಗಬೇಕು ಎಂದು ಸಾಮಾಜಿಕ ಕಳಕಳಿಯ ಮನವಿ ಮಾಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post