No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಯಶಸ್ಸಿನ ಹಾದಿಗೆ ಶಿಕ್ಷಣವೇ ಶಕ್ತಿಯುತ ಅಸ್ತ್ರ: ಶಾಸಕ ಶಾಂತನಗೌಡ

ಎನ್ಇಎಸ್: ಚೀಲೂರು ಶಾಲೆಗಳ ನೂತನ ಕಟ್ಟಡ ಲೋಕಾರ್ಪಣೆ

kalpa News by kalpa News
September 9, 2026
in ದಾವಣಗೆರೆ
0
Education-powerful weapon-success-MLA Shantanagowda
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ/ಚೀಲೂರು  |

ಯಾವುದೇ ಸ್ಪರ್ಧಾತ್ಮಕ ಯುಗದಲ್ಲಿ ಹೋರಾಟ ನಡೆಸಿ ಯಶಸ್ಸು ಸಾಧಿಸಲು ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬರಿಗೂ ತಲುಪಬೇಕು ಎಂಬ ಬದ್ಧತೆಯನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್ಇಎಸ್) ಸ್ಥಾಪನಾ ದಿನದಿಂದಲೂ ಉಳಿಸಿಕೊಂಡು ಬಂದಿದೆ ಎಂದು ಹೊನ್ನಾಳಿ ಕ್ಷೇತ್ರದ ಶಾಸಕ ಶಾಂತನಗೌಡ ಹೇಳಿದರು.

ದಾವಣಗೆರೆ ಜಿಲ್ಲೆಯ ಚೀಲೂರಿನಲ್ಲಿರುವ ಎನ್ಇಎಸ್ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ, ನ್ಯಾಷನಲ್ ಇಂಗ್ಲೀಷ್ ಶಾಲೆಯ ನೂತನ ಕಟ್ಟಡ ಹಾಗೂ ರೋಟರಿ ಜಾಗತಿಕ ಅನುದಾನದಲ್ಲಿ ನವೀಕರಣಗೊಂಡ ರಾಷ್ಟ್ರೀಯ ಪ್ರೌಢಶಾಲೆಯ ಕಟ್ಟಡ ಲೋಕಾರ್ಪಣೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಿದ ಶಾಲೆಗಳ ಅಧ್ಯಾಪಕರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎನ್ಇಎಸ್ ಸಂಸ್ಥೆಯ ಸ್ಥಾಪನೆ ಹಾಗೂ ಬೆಳವಣಿಗೆಯಲ್ಲಿ ಪಾಲ್ಗೊಂಡ ಸಮಾಜ ಸೇವಕರ ಸೇವೆ ಎಂದೆಂದಿಗೂ ಸ್ಮರಣೀಯ. ಶಿಕ್ಷಣದ ಮೂಲಕ ಸಮಾಜದ ಸಬಲೀಕರಣಕ್ಕೆ ಸಂಸ್ಥೆ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಗ್ರಾಮೀಣ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ವಿದ್ಯಾಭ್ಯಾಸ ಒದಗಿಸುವ ಉದ್ದೇಶದಿಂದ ಸರ್ಕಾರ ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಿದೆ. ಇದರ ನಡುವೆಯೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತರಿಗೆ ಶಿಕ್ಷಣ ಮತ್ತು ಉನ್ನತೀಕರಣದ ಅವಕಾಶಗಳನ್ನು ಕಲ್ಪಿಸಲು ಎನ್ಇಎಸ್‌ ನಂತಹ ಸಂಸ್ಥೆಗಳ ಸಹಭಾಗಿತ್ವ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾಗಿದೆ ಎಂದರು.Kumadvathi College Shikariura

₹1.06 ಕೋಟಿ ವೆಚ್ಚದಲ್ಲಿ ಕನ್ನಡ ಮಾಧ್ಯಮ ಶಾಲೆ ನವೀಕರಣ

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ರೋಟರಿಯ ಜಾಗತಿಕ ಅನುದಾನದೊಂದಿಗೆ ಸಂಸ್ಥೆಯ ಅನುದಾನವನ್ನು ಸೇರಿಸಿ ರಾಷ್ಟ್ರೀಯ ಕನ್ನಡ ಮಾಧ್ಯಮ ಶಾಲೆಯನ್ನು ಒಟ್ಟು ₹1.06 ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿದೆ. ನೂತನ ಶೌಚಾಲಯಗಳು, ಕಂಪ್ಯೂಟರ್ ಪ್ರಯೋಗಾಲಯ, ಸ್ಮಾರ್ಟ್ ತರಗತಿಗಳು ಹಾಗೂ ಶಿಕ್ಷಕರ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಈ ಅನುದಾನ ಒಳಗೊಂಡಿದೆ.

Also read>> ಶ್ರೀ ರಾಮಕೃಷ್ಣ ವಿದ್ಯಾನಿಕೇತನ | ಗಣಪ ಚಿತ್ರರಚನೆ ಸ್ಪರ್ಧೆ: ಸೆ.16ರಂದು ಬಹುಮಾನ ವಿತರಣೆ

ಜೊತೆಯಲ್ಲಿ ಎನ್ಇಎಸ್ ಸಂಸ್ಥೆಯ ಅನುದಾನದಲ್ಲಿ, ಆಂಗ್ಲ‌ ಮಾಧ್ಯಮ ಶಾಲೆಗೆ ನೂತನ ಕಟ್ಟಡ, ಡಿಜಿಟಲ್ ತರಗತಿಗಳು, ಭಾಷೆ, ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯಗಳನ್ನು ನಿರ್ಮಿಸಲಾಗಿದೆ. ಶಾಲೆಗಳ ಮೂಲಸೌಕರ್ಯವನ್ನು ಜವಾಬ್ದಾರಿಯುತವಾಗಿ ಸಂರಕ್ಷಿಸಿ, ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.PES Shivamogga

ರೋಟರಿ ಜಿಲ್ಲಾ ಗವರ್ನರ್ ರೋ.ಬಿ.ಎಂ.ಭಟ್ ಮಾತನಾಡಿ, ಅನುದಾನಿತ ಸಂಸ್ಥೆಯಲ್ಲಿ ‘ಹ್ಯಾಪಿ ಸ್ಕೂಲ್’ ನಿರ್ಮಾಣಕ್ಕೆ ರೋಟರಿ ಸಹಕಾರ ನೀಡಿರುವುದು ಸಂತಸದ ಸಂಗತಿ. ರೋಟರಿ ನೀಡಿರುವುದು ಕೇವಲ ಕೊಡುಗೆಯಲ್ಲ; ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಾಡಿರುವ ಹೂಡಿಕೆ. ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡುವ ವಿದ್ಯಾರ್ಥಿಗಳು ಮುಂದೆ ಸಮಾಜಕ್ಕೆ ಮರಳಿ ಕೊಡುಗೆ ನೀಡುವ ಜವಾಬ್ದಾರಿ ಹೊಂದಬೇಕು ಎಂದು ಕರೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ರೋಟರಿ ಮಾಜಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ರೋಟರಿ ಶಿವಮೊಗ್ಗ ಅಧ್ಯಕ್ಷರಾದ ಗೋಪಿನಾಥ್, ಮಾಜಿ ಅಧ್ಯಕ್ಷರಾದ ಆನಂದ್, ರಾಷ್ಟ್ರೀಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪೂರ್ಣಿಮಾ ಹಾಗೂ ರಾಷ್ಟ್ರೀಯ ಆಂಗ್ಲ‌ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯರಾದ ಆದರ್ಶ್ ಮಾತನಾಡಿದರು.

ಎನ್ಇಎಸ್ ನಿರ್ದೇಶಕರಾದ ಪಿ.ಮೈಲಾರಪ್ಪ ಅಧ್ಯಕ್ಷತೆ ವಹಿಸಿದ್ದರು. ನಿಯೋಜಿತ ರೋಟರಿ ಗವರ್ನರ್ ವಸಂತ ಹೋಬಳಿದಾರ್, ಎನ್ಇಎಸ್ ಖಜಾಂಚಿ ಡಿ.ಜಿ.ರಮೇಶ್ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Davanagere/ChiluruEducationMLA Shanthanagowdaದಾವಣಗೆರೆ/ಚೀಲೂರುರಾಷ್ಟ್ರೀಯ ಶಿಕ್ಷಣ ಸಮಿತಿಶಾಸಕ ಶಾಂತನಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ರಾಮಕೃಷ್ಣ ವಿದ್ಯಾನಿಕೇತನ | ಗಣಪ ಚಿತ್ರರಚನೆ ಸ್ಪರ್ಧೆ: ಸೆ.16ರಂದು ಬಹುಮಾನ ವಿತರಣೆ

Next Post

ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ: ರಾಘವೇಶ್ವರ ಶ್ರೀ

kalpa News

kalpa News

Next Post
obstructing-river-leads-disaster-raghaveshwara-sri

ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ: ರಾಘವೇಶ್ವರ ಶ್ರೀ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL