ಚೆನ್ನೈ: ನಟ ಕಂ ರಾಜಕಾರಣಿ ಕಮಲ್ ಹಾಸನ್ ಅವರು ರ್ಯಾಲಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಅರವಾಕುರಿಚಿಯಲ್ಲಿ ಉಪಚುನಾವಣೆಯ ರ್ಯಾಲಿಯಲ್ಲಿ ಕಮಲ್ ಪಾಲ್ಗೊಂಡಿದ್ದ ವೇಳೆ ಇಬ್ಬರು ವ್ಯಕ್ತಿಗಳು ಅವರ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಆದರೆ, ಭದ್ರತಾ ಸಿಬ್ಬಂದಿ ರಕ್ಷಣೆ ನೀಡಿದ ಹಿನ್ನೆಲೆಯಲ್ಲಿ ಮೊಟ್ಟೆ ಹಾಗೂ ಕಲ್ಲು ಕಮಲ್ ಅವರಿಗೆ ತಗುಲಿಲ್ಲ ಎಂದು ವರದಿಯಾಗಿದೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.
ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಮಲ್ ಹಾಸನ್, ಈ ಕೃತ್ಯದಿಂದಾಗಿ ಅಭಿಮಾನಿಗಳು ಉದ್ರಿಕ್ತರಾಗಬಾರದು. ಇದರ ಕುರಿತಾಗಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.
Dear MNM family and fans, this is an acid test for our decorum and demeanour. Do not listen to their noises and be drawn into their violence. They are extremists who are slighted by the Truth. Naalai Namadhey!
— Kamal Haasan (@ikamalhaasan) May 16, 2019
Discussion about this post