ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ 8 ಉಗ್ರಗಾಮಿಗಳನ್ನು ಬಂಧಿಸಲಾಗಿದ್ದು, ಈ ವೇಳೆ ಬರೋಬ್ಬರಿ 2900 ಕೆಜಿ ಸುಧಾರಿತ ಸ್ಪೋಟಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಜೈಶ್ ಎ ಮೊಹಮ್ಮದ್ ಹಾಗೂ ಅನ್ಸರ್ ಘಜ್ವತ್-ಉಲ್-ಹಿಂದ್ ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಅಂತಾರಾಷ್ಟ್ರೀಯ ಭಯೋತ್ಪಾದನಾ ಮಾಡ್ಯೂಲ್ ಭೇದಿಸಿರುವ ಜೆಕೆ ಪೊಲೀಸರು 8 ಮಂದಿ ಉಗ್ರರನ್ನು ಬಂಧಿಸಿದ್ದಾರೆ.
ಕಳೆದ ಅ.27ರಂದು ಶ್ರೀನಗರದಲ್ಲಿ ಜೈಶ್ ಉಗ್ರ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್’ಗಳು ಕಾಣಿಸಿದ್ದವು. ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವೈದ್ಯ ಆದಿಲ್ ಅಹ್ಮದ್ ರಾಥರ್ ಪೋಸ್ಟರ್ ಅಂಟಿಸುತ್ತಿರುವುದು ಬೆಳಕಿಗೆ ಬಂದಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 2 ವಾರಗಳ ಹಿಂದೆಯೇ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಉಗ್ರ ರಾಥರ್’ನನ್ನು ಬಂಧಿಸಿದ್ದರು. 2 ವಾರಗಳಿಂದಲೂ ಸದ್ದಿಲ್ಲದೇ ಕಾರ್ಯಾಚರಣೆ ನಡೆಸುತ್ತಿದ್ದರು.
ಆರೋಪಿ ಮುಜಾಮ್ಮಿಲ್ ಜೊತೆ ಇದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ ರೈಫಲ್, ಜೀವಂತ ಗುಂಡುಗಳು ಪತ್ತೆಯಾಗಿತ್ತು. ಈ ಬಗ್ಗೆ ಶಕೀಲ್’ನನ್ನು ಪ್ರಶ್ನಿಸಿದಾಗ ಅದು ತನ್ನ ಸಹೋದ್ಯೋಗಿಯ ಕಾರು ಅನ್ನುವುದು ಗೊತ್ತಾಗಿದೆ. ಅಷ್ಟೇ ಅಲ್ಲ ಆತ ಧೋಜ್’ನ ಬಾಡಿಗೆ ರೂಮಿನಲ್ಲಿ ಬಚ್ಚಿಟ್ಟಿದ್ದ ಸ್ಫೋಟಕ ವಸ್ತುಗಳು, 20 ಟೈಮರ್, ಇತ್ರ ಅನುಮಾನಾಸ್ಪದ ವಸ್ತುಗಳನ್ನೂ ಪತ್ತೆ ಹಚ್ಚಲಾಯಿತು.
ಏನೆಲ್ಲಾ ವಶಕ್ಕೆ ಪಡೆಯಲಾಗಿದೆ?
ಶಕೀಲ್ ಕೊಠಡಿಯಿಂದ ಸ್ಫೋಟಕ ವಸ್ತುಗಳು ತುಂಬಿದ್ದ 8 ದೊಡ್ಡ ಸೂಟ್ಕೇಸ್’ಗಳು, 4 ಸಣ್ಣ ಸೂಟ್ಕೇಸ್’ಗಳು ಪತ್ತೆಯಾಗಿವೆ.
ಜಮ್ಮು ಕಾಶ್ಮೀರ ಪೊಲೀಸರು ಮತ್ತು ಹರಿಯಾಣ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಕೆ -74 ಅಸಾಲ್ಟ್ ರೈಫಲ್, ಮ್ಯಾಗಜೀನ್’ಗಳು, 83 ಸಜೀವ ಗುಂಡುಗಳು, ಒಂದು ಪಿಸ್ತೂಲ್, 8 ಸಜೀವ ಗುಂಡುಗಳು, 2 ಖಾಲಿ ಕಾರ್ಟ್ರಿಡ್ಜ್ ಮತ್ತು 2 ಹೆಚ್ಚುವರಿ ಮ್ಯಾಗಜೀನ್’ಗಳು ಪತ್ತೆಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post