ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ರವೀಂದ್ರನಗರ 1ನೇ ಅಡ್ಡರಸ್ತೆಯ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ಪ್ರಭಾವತಿ (57–60) ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಸುಮಾರು 15ರಿಂದ 20 ದಿನಗಳ ಹಿಂದೆಯೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
Also Read>> ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?
ಸ್ಥಳೀಯರ ಪ್ರಕಾರ, ಸುಮಾರು 15 ದಿನಗಳ ಹಿಂದೆ ಮನೆಯ ಎದುರಿನ ಕ್ಯಾಂಟೀನ್‌ನಿಂದ ತಿಂಡಿ ತೆಗೆದುಕೊಂಡು ಹೋದ ಬಳಿಕ ಪ್ರಭಾವತಿ ಹೊರಗೆ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ವೃದ್ಧೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯೊಳಗಿದ್ದ ಸಾಕು ನಾಯಿಯೂ ಮೃತಪಟ್ಟಿರುವುದು ಕಂಡುಬಂದಿದೆ.
ಮೃತರಿಗೆ ಇಬ್ಬರು ಪುತ್ರಿಯರು ಇದ್ದು, ಒಬ್ಬರು ಶಿವಮೊಗ್ಗದಲ್ಲಿದ್ದು ಮತ್ತೊಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಅವರು ‘ಜನವಾರ್ತೆ’ ಪತ್ರಿಕೆಯ ದಿವಂಗತ ಮಾಲೀಕ ನಾಗರಾಜ ಅವರ ಪತ್ನಿಯಾಗಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.
Also Read>> 1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿದ ಮಾಧ್ಯಮ ಪ್ರತಿನಿಧಿಗಳಿಗೆ ಮೃತರ ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















