ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ ವಾಜಪೇಯಿ ಲೇಔಟ್ ಬಳಿ ನಡೆದಿದೆ.
ಆರೋಪಿಯು ವಾಜಪೇಯಿ ಬಡಾವಣೆಯಲ್ಲಿ ಅಡಗಿಕೊಂಡಿರುವ ಖಚಿತ ಮಾಹಿತಿ ಆಧಾರದ ಮೇಲೆ, ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ ಸತ್ಯನಾರಾಯಣ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿಯು ಪೊಲೀಸ್ ಸಿಬ್ಬಂದಿ ಗಣೇಶ್ ಎಂಬುವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಇನ್ಸ್’ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

Also read: ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ
ಕಿಶೋರ (26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಎಸ್ಪಿ ನಿಖಿಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಆರೋಪಿ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








