ನವದೆಹಲಿ: ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ರಾಜ್ಯಕ್ಕೆ 2 ಹಂತದ ಮತದಾನವನ್ನು ನಿಗದಿ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಘೋಷಣೆ ಮಾಡಿರುವಂತೆ ರಾಜ್ಯದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಎಪ್ರಿಲ್ 18ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎಪ್ರಿಲ್ 23ರಂದು ಎರಡನೆಯ ಹಂತದ ಮತದಾನ ನಡೆಯಲಿದೆ.
ಮೊದಲ ಹಂತದ ನಾಮಪತ್ರ ಪ್ರಕ್ರಿಯೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಮಾರ್ಚ್ 25 ಕೊನೆಯ ದಿನವಾಗಿದೆ. 26ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 23ರಂದು ಫಲಿತಾಂಶ ಘೋಷಣೆಯಾಗಲಿದೆ.
Discussion about this post