ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಡೆಪ್ಯೂಟಿ ಛೇರ‌್ಮನ್ ಹುದ್ದೆಗೆ ನಾಳೆ ಚುನಾವಣೆ ನಡೆಯಲಿದ್ದು, ಆಡಳಿತ ಹಾಗೂ ಪ್ರತಿಪಕ್ಷಗಳೆರಡರ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಸಂಜೆಯೊಳಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಳೆ ಚುನಾವಣೆ ನಡೆದು ಹೊಸ ಡೆಪ್ಯೂಟಿ ಛೇರ‌್ಮನ್ ಆಯ್ಕೆಯಾಗಲಿದೆ.
ರಾಜ್ಯಸಭಾ ಡೆಪ್ಯೂಟಿ ಛೇರ‌್ಮನ್ ಆಯ್ಕೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯುನ ಹರಿವಂಶ್ ಇಂದು ನಾಮಪತ್ರ ಸಲ್ಲಿಸಿದರು. ಕೇಂದ್ರ ಸಚಿವ ಅನಂತ್ ಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.
ಇನ್ನು, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ. ಹರಿಪ್ರಸಾದ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ಈ ಮುನ್ನ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಎನ್‌ಸಿಪಿಯ ವಂದನಾ ಚೌಹಾಣ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇವರನ್ನು ಗೆಲ್ಲಿಸುವುದಕ್ಕಾಗಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಬಿಜೆಡಿಯ ನವೀನ್ ಪಟ್ನಾಯಕ್ ಮತ್ತು ಶಿವಸೇನೆ ಬೆಂಬಲ ಪಡೆಯಲು ಮುಂದಾಗಿದ್ದಾರೆ.















