ಶಿವಮೊಗ್ಗ: ಜಿಲ್ಲೆಯ ಹಲವೆಡೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಜಿಲ್ಲೆಯ ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ, ಹೊಸನಗರ ಪಟ್ಟಣ ಪಂಚಾಯ್ತಿಗಳಲ್ಲಿ ಮೇ 29 ರಂದು ಹಾಗೂ ಜೂನ್ 1 ರಂದು ಸೊರಬ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಶಾಂತಿಯುತವಾಗಿ ನಡೆಸಲು ಹಾಗೂ ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣೆಯ ದಿನ ಬೆಳಗ್ಗೆ 5 ರಿಂದ ಸಂಜೆ 7 ರವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಡೆಸದಂತೆ ನಿಷೇಧಿಸಿ ಆದೇಶಿಸಲಾಗಿದೆ.
Discussion about this post