ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು, ಕಾರ್ಮಿಕರರು ಕೆಲಸ ಖಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಶುಕ್ರವಾರ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹೊರಾವರಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಮಜ್ದೂರ್ ಸಂಘದ ರಾಜ್ಯಕಾರ್ಯದರ್ಶಿ ಎಚ್.ಎಲ್. ವಿಶ್ವನಾಥ್, ಜೀವದ ಹಂಗುತೊರೆದು ಕೋವಿಡ್19ರ ವಿರುದ್ಧದ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರಿಗೆ, ಕಾರ್ಮಿಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸುವುದರ ಜೊತೆಗೆ ಸೇವಾ ಭದ್ರತೆ ಮತ್ತು ಕೆಲಸ ಖಾಯಂಗೊಳಿಸಬೇಕು ಎಂದರು.
ಸಂಘದ ಜಿಲ್ಲಾಧ್ಯಕ್ಷರಾದ ಡಾ.ಹೇಮಲತಾ ಮಾತನಾಡಿ, ಆರೋಗ್ಯ ಭಾಗ್ಯ ಯೋಜನೆಯನ್ನು ನಮಗೂ ವಿಸ್ತರಿಸಬೇಕು. ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ವೇತನ ಪಾವತಿ ಮಾಡಬೇಕು. ಸರ್ಕಾರ ಕೆಲಸಕ್ಕೆ ಮಾತ್ರ ನಮ್ಮನ್ನು ಬಳಸಿಕೊಂಡು ನೀಡಬೇಕಾದ ಸೌಲಭ್ಯದಲ್ಲಿ ಮಾತ್ರ ತಾರತಮ್ಯ ಮಾಡುವುದು ಸರಿಯಲ್ಲ. ಸರ್ಕಾರ ನಮ್ಮ ನ್ಯಾಯುತ ಬೇಡಿಕೆ ಈಡೇರಿಸದಿದ್ದಲ್ಲಿ ಅನಿವಾರ್ಯವಾಗಿ ನಾವುಗಳು ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದರು.
ಡಾ.ದತ್ತಾತ್ರೇಯ ಮಾತನಾಡಿ, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಡಾ.ರವೀಂದ್ರನಾಥ ಕೋಟಿ, ಪವನ್, ಡಾ.ವೀರಭದ್ರಪ್ಪ ಸೇರಿದಂತೆ ಅನೇಕರು ತೋಳಿಗೆ ಕಪ್ಪು ಪಟ್ಟಿಯನ್ನು ಬಿಗಿದುಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get in Touch With Us info@kalpa.news Whatsapp: 9481252093
Discussion about this post