ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಎನ್’ಕೌಂಟರ್ ಪ್ರಿ ಪ್ಲಾನ್ ಅಲ್ಲ. ಬದಲಾಗಿ ನಮ್ಮ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಶಂಷಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ಕ್ರೈಂ ಸೀನ್ ರಿ ಕನ್ಸಸ್ಟ್ರಕ್ಷನ್ ನಡೆಸಲು ಘಟನಾ ಸ್ಥಳಕ್ಕೆ ಇಂದು ಮುಂಜಾನೆ 3 ಗಂಟೆ ವೇಳೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಆರೋಪಿಗಳ ನಮ್ಮ ಸಿಬ್ಬಂದಿಗಳ ಶಸ್ತ್ರಾಸ್ತ್ರ ಕಸಿದು, ಆಕ್ರಮಣ ಮಾಡಲು ಯತ್ನಿಸಿದ್ದಾರೆ. ಅಲ್ಲದೇ, ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದು, ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದಿದ್ದಾರೆ.
ಪಶು ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಆರಿಫ್, ನವೀನ್, ಶಿವ ಮತ್ತು ಚನ್ನಕೇಶವುಲು ಅವರುಗಳು ಇಂದು ನಸುಕಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.
Get in Touch With Us info@kalpa.news Whatsapp: 9481252093















