ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ್ಲಿ ಇಂದು ನಸುಕಿನಲ್ಲಿ ಉಗ್ರರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಿದ ಸೇನೆ ಇಬ್ಬರು ಉಗ್ರರನ್ನು ಜೀವಂತ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ನಸುಕಿನಿಂದಲೇ ಕಾರ್ಯಾಚರಣೆ ಆರಂಭವಾಗಿದ್ದು, ಪ್ರಸ್ತುತ ಮುಂದುವರೆದಿದ್ದು, ಭಾರೀ ಗುಂಡಿನ ಕಾಳಗದ ನಡುವೆಯೇ, ಇಬ್ಬರು ಉಗ್ರರನ್ನು ಜೀವಂತ ಹಿಡಿಯುವನ್ನು ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಇನ್ನು, ನಿನ್ನೆಯಷ್ಟೇ ಪುಲ್ವಾಮಾ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೈಷ್ ಎ ಮೊಹಮದ್ ಸಂಘಟನೆಯ ಹಲವು ಉಗ್ರರನ್ನು ಸೇನೆ ಬೇಟೆಯಾಡಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಕಾರ್ಯಾಚರಣೆ ಮುಂದುವರೆದಿದೆ.
Discussion about this post