ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಇಡಿಯ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಕ್ಷಣಗಳು ಸನಿಹಗೊಂಡಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಇದು ಜಾರಿಯಾಗಲಿದೆ.
Delhi: Asha Devi, mother of 2012 Delhi gang-rape victim show victory sign after Supreme Court’s dismissal of death row convict Pawan Gupta’s plea seeking stay on execution. pic.twitter.com/FPDy0hgisv
— ANI (@ANI) March 19, 2020
ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಎಲ್ಲ ರೀತಿಯ ಸಿದ್ದತೆಗಳು ನಡೆದಿದೆ. ಈಗಾಗಲೇ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ನಾಲ್ವರೂ ಗಲ್ಲಿಗೇರಿಸಲು ಫಿಟ್ ಅಂಡ್ ಫೈನ್ ಆಗಿದ್ದಾರೆ ಎಂದು ವೈದ್ಯರು ವರದಿ ನೀಡಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಎಲ್ಲರನ್ನೂ ಗಲ್ಲಿಗೇರಿಸಲಾಗುತ್ತದೆ.
#WATCH Asha Devi (mother of 2012 Delhi gang-rape victim) to ANI: Finally the convicts will be hanged, the petition in Supreme Court has been dismissed. I would like to thank all the people of the society, especially our daughters & women. pic.twitter.com/9zKGuYKlQM
— ANI (@ANI) March 19, 2020
ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುತ್ತಿರುವ ಹಿನ್ನೆಲೆಯಲ್ಲಿ ತಿಹಾರ್ ಜೈಲಿನ ಹೊರಭಾಗದಲ್ಲಿ ಸಂಭ್ರಮಾಚರಣೆ ನಡೆಸಲು ಸಾವಿರಾರು ಮಂದಿ ಜಮಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಡಿಯ ಪ್ರದೇಶದಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.
Get in Touch With Us info@kalpa.news Whatsapp: 9481252093
Discussion about this post