ಕಲ್ಪ ಮೀಡಿಯಾ ಹೌಸ್ | ಉಡುಪಿ |
ಕಳೆದ ಮಳೆಗಾದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ಸದ್ಯ ತೆರವುಗೊಳಿಸಲಾಗಿದ್ದು, ಪ್ರವಾಸಿಗರು ಇನ್ಮುಂದೆ ಮುಕ್ತವಾಗಿ ತೆರಳಬಹುದಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ಬೀಚ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ನಿಷೇಧವನ್ನು ತೆರವುಗೊಳಿಸಿದ್ದು, ಮಲ್ಪೆ ಬೀಚ್ ಮತ್ತೆ ಪ್ರವಾಸಿಗರಿಗೆ ಮುಕ್ತವಾಗಿದೆ. ಕಡಲಿಗಿಳಿಯದಂತೆ ಬೀಚ್ ಉದ್ದಕ್ಕೂ ಹಾಕಲಾಗಿದ್ದ ತಡೆಬೇಲಿಯನ್ನು ತೆರವುಗೊಳಿಸಲಾಗಿದೆ. ಜಲ ಕ್ರೀಡೆಗಳು ಆರಂಭಗೊಂಡಿವೆ.
ಮಲ್ಪೆ ಬೀಚ್’ನಲ್ಲಿ ವಾಟರ್ ಸ್ಪೋರ್ಟ್ಸ್’ಗಳಾದ ಜೆಸ್ಕಿ, ಪ್ಯಾರಸೈಲಿಂಗ್, ಬನಾನ ರೈಡ್, ಬಂಪಿ ರೈಡ್, ಝೋರ್ಬಿಂಗ್, ಬೋಟ್ ರೌಂಡ್ ಸೇರಿದಂತೆ ಇನ್ನಿತರ ಚಟುವಟಿಕೆಗಳು ಆರಂಭಗೊಂಡಿದೆ.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿಗಳು, ಮಲ್ಪೆ ಬೀಚನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದ್ದು, ಜಲ ಕ್ರೀಡೆಗೂ ಅವಕಾಶ ನೀಡಲಾಗಿದೆ. ಆದರೆ, ಕಡಲಿನ ಜತೆ ದುಸ್ಸಾಹಸಕ್ಕಿಳಿಯದೆ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಮಲ್ಪೆ ಬೀಚ್ ಪ್ರವಾಸಿಗರ ಭೇಟಿಗೆ ಮುಕ್ತವಾಗಿದ್ದು, ಸೈಂಟ್ ಮೇರಿಸ್ ಐಲ್ಯಾಂಡ್’ಗೆ ಪ್ರವಾಸಿಗರ ನಿರ್ಬಂಧ ತೆರವುಗೊಳಿಸುವ ಬಗ್ಗೆ ಸೈಂಟ್ ಮೇರಿಸ್ ಐಲ್ಯಾಂಡ್’ಗೆ ಜಿಲ್ಲಾಧಿಕಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























Discussion about this post