ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ಪ್ರಜ್ಞಾ ಎಜುಕೇಷನ್ ಟ್ರಸ್ಟ್’ನಿಂದ ಮತ್ತೊಂದು ಹೆಮ್ಮೆಯ ಕೊಡುಗೆಯಾಗಿ ಪೇಸ್ ಇಂಟರ್’ನ್ಯಾಷನಲ್ ಸ್ಕೂಲ್ #PACEInternationalSchool ಉದ್ಘಾಟನಾ ಸಮಾರಂಭ ಮಾ.23ರ ಭಾನುವಾರ ಸಂಜೆ 5.30ಕ್ಕೆ ಪೇಸ್ ಕಾಲೇಜು ಆವರಣದಲ್ಲಿರುವ ಜಯಲಕ್ಷ್ಮೀ ಈಶ್ವರಪ್ಪ ಕನ್ವನ್ಷೆನ್ ಹಾಲ್’ನಲ್ಲಿ ನಡೆಯಲಿದೆ ಎಂದು ಪ್ರಜ್ಞಾ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಸ್ ಪಿಯು ಕಾಲೇಜು #PACEPUCollege ಶಿವಮೊಗ್ಗದ ಅಗ್ರಗಣ್ಯ ಪದವಿ ಪೂರ್ವ ಕಾಲೇಜಿನಲ್ಲಿ ಒಂದಾಗಿದ್ದು ಇವರದೇ ಆಶ್ರಯದಲ್ಲಿ ತಲೆ ಎತ್ತುತ್ತಿರುವ ಮತ್ತೊಂದು ಶಿಕ್ಷಣ ಸಂಸ್ಥೆ ಪೇಸ್ ಇಂಟರ್’ನ್ಯಾಷನಲ್ ಸ್ಕೂಲ್ ಆಗಿದ್ದು, ಇಂದಿನ ಮಕ್ಕಳಿಗೆ 21ನೇ ಶತಮಾನಕ್ಕೆ ಅಗತ್ಯವಿರುವ ಕೌಶಲ್ಯಗಳ ಜೊತೆಗೆ ಸಂಸ್ಕಾರಯುತ, ಮೌಲ್ಯಾಯುತ ಮತ್ತು ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ದೂರದೃಷ್ಟಿಯಿಂದ ಈ ವಸತಿ ಶಾಲೆ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.
Also Read>> ಜನೌಷಧಿ ಆಶಯವನ್ನು ಉಳಿಸಿ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಒತ್ತಾಯ
ಶಾಲೆಯ ಉದ್ಘಾಟನೆಯನ್ನು ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಸಂಸ್ಥಾಪಕರಾದ ಡಾ. ಎಂ.ಮೋಹನ್ ಆಳ್ವಾ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಪ್ರಜ್ಞಾ ಟ್ರಸ್ಟ್ ಅಧ್ಯಕ್ಷರಾದ ಕೆ.ಎಸ್. ಈಶ್ವರಪ್ಪ #KSEshwarappa ವಹಿಸಲಿದ್ದು, ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಪ್ರೊ.ಎಚ್. ಆನಂದ್ ಕಾರ್ಯದರ್ಶಿ ಪ್ರೊ.ಬಿ.ಎನ್. ವಿಶ್ವನಾಥಯ್ಯ, ಖಜಾಂಚಿಗಳಾದ ಕೆ.ಈ. ಕಾಂತೇಶ್ ಮತ್ತು ಶಾಲೆಯ ಪ್ರಾಂಶುಪಾಲರಾದ ಎನ್. ಆರ್. ಪವನ್ ಕುಮಾರ್ ಉಪಸ್ಥಿತರಿರುವರು ಎಂದರು.

ಜನಮನ್ನಣೆ ಗಳಿಸಿದ ಈ ನೃತ್ಯ ರೂಪಕ ದೇಶ ವಿದೇಶಗಳಲ್ಲಿ ಪ್ರದರ್ಶಿಸಲ್ಪಟ್ಟಿದ್ದು, ಶಿವಮೊಗ್ಗದ ಜನತೆ ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಯಕ್ರಮದ ಮೆರಗು ಹೆಚ್ಚಿಸಬೇಕು. ಎಲ್ಲರಿಗೂ ನೆರವಾಗುವಂತೆ ಕಾರ್ಯಕ್ರಮದ ನಂತರ ಸೂಕ್ತ ಬಸ್ ವ್ಯವಸ್ಥೆ ಮತ್ತು ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಮಕ್ಕಳಿಗೆ ಭೌದ್ಧಿಕ, ನೈತಿಕ ಹಾಗೂ ಆಧ್ಯಾತ್ಮಿಕ ನೆಲೆಕಟ್ಟಿನಲ್ಲಿ ಸರ್ವಾಂಗೀಣ ಶಿಕ್ಷಣ ನೀಡುವ ನಿಟ್ಟಿನಲ್ಲಿ ಹಲವಾರು ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020ರನ್ವಯ ಸಾಮಥ್ಯ ಆಧಾರಿತ ಮತ್ತು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಶಾಲೆಯಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿಶೇಷವಾದ ಒಳಾಂಗಣ ಚಟುವಟಿಕೆ ಮತ್ತು ಆಟದ ಕೊಠಡಿಯನ್ನು ನಿರ್ಮಿಸಲಾಗಿದೆ. ಮಕ್ಕಳಲ್ಲಿ ಶಿಸ್ತು, ಸಂಯಮ ಬೆಳೆಸಿ ಭವಿಷ್ಯಕ್ಕೆ ಅಣಿಗೊಳಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಖಜಾಂಚಿ ಕೆ.ಈ. ಕಾಂತೇಶ್, ಪ್ರೊ.ಎಚ್. ಆನಂದ್, ಪ್ರೊ. ಬಿ.ಎನ್. ವಿಶ್ವನಾಥಯ್ಯ, ಪ್ರಾಂಶುಪಾಲ ಪವನ್ ಕುಮಾರ್ ಕೆ.ಆರ್., ಡಾ.ಮೈತ್ರೇಯಿ ಆದಿತ್ಯ ಪ್ರಸಾದ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post