ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ವಿಕಲಚೇತನರು ತಮ್ಮ ತಮ್ಮ ಬೂತ್’ಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರೇರೇಪಿಸಿದರು.
ಎಲ್ಲ ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವ ಕುರಿತು ಜಾಗೃತಿ ಮೂಡಿಸಲು ಮಹಾನಗರಪಾಲಿಕೆಯಿಂದ ಪ್ರಮುಖ ರಸ್ತೆಗಳಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ವಿಕಲಚೇತನರ ಮತಗಟ್ಟೆ
ಮಿಳಘಟ್ಟದಲ್ಲಿ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 23 ಜನ ವಿಕಲಚೇತನರು ಇಲ್ಲಿ ನಿರ್ವಹಣೆ ಮಾಡುವರು ಎಂದು ತಿಳಿಸಿದ ಅವರು ಎಲ್ಲ ಅರ್ಹ ಮತದಾರರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಇಂದು ಬೆಳಿಗ್ಗೆ ಮಹಾನಗರಪಾಲಿಕೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಮನಿ, ಸ್ವೀಪ್ ಅಧಿಕಾರಿ ನವೀದ್ ಹಾಗೂ ಸಹಸ್ರಾರು ಸಂಖ್ಯೆಯ ವಿಕಲಚೇತನರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post