ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಲ್ಲೇಶ್ವರಮ್‌ನ ಹವ್ಯಕ ಮಹಾಸಭಾ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು .
ನಗಾರಭಿವೃದ್ದಿ ಸಚಿವ ಬಿ.ಎ.ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸಪೂಜಾರಿ, ಹಿಂದುಳಿದ ವರ್ಗದ ಬಿಜೆಪಿ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರಬಾಬು ಮತ್ತು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ದೀಪಾ ಬೆಳಗಿಸಿ, ಭಾರತಮಾತೆ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಕುಂಬಾರ ಕಲೆ ಮಡಿಕೆ ತಯಾರು ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಧ್ಯಕ್ಷ ನೆ.ಲ .ನರೇಂದ್ರಬಾಬು ಮಾತನಾಡಿ, ಸಂಘಟನೆ ಹಾಗೂ ಸರ್ಕಾರದ ಕಾರ್ಯಕ್ರಮ ಪ್ರತಿ ಮನೆಗೆ ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಕಂಡ ಕನಸು ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿವೃದ್ದಿ ಚಿಂತನೆಗಳು ನಾಡಿಗೆ ತಲುಪಬೇಕು. ರಾಜ್ಯದಲ್ಲಿ ಶೇಕಡ 64ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಹಿಂದುಳಿದ ವರ್ಗದ ಸಮಾಜ ಮಂಚೂಣಿಗೆ ಬರಬೇಕು. ಆಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.
ಸಚಿವ ಕೋಟ ಶ್ರೀನಿವಾಸಪೂಜಾರಿ ಮಾತನಾಡಿ, ರಾಜ್ಯದಲ್ಲಿ ಧ್ವನಿ ಇಲ್ಲದೇ ಇರುವ ಹಿಂದುಳಿದ ವರ್ಗದ ಜನರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು. ಹಿಂದುಳಿದ ವರ್ಗದವರು ಎಲ್ಲರು ಒಗ್ಗಾಟ್ಟಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ವಿರುದ್ದ ತೋಳ್ಬಲದ ಮೂಲಕ ಹೋರಟ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ತನ್ನ ಬೆಳೆಯ ಮಾರಾಟದ ಹಕ್ಕನ್ನು ಬಿಜೆಪಿ ಸರ್ಕಾರ ರೈತನಿಗೆ ನೀಡಿದೆ. ಕಾರ್ಯಕರ್ತರು ಕೃಷಿ ಮಸೂದೆಯ ಲಾಭಂಶವನ್ನು ಪ್ರತಿಯೊಬ್ಬ ರೈತರಿಗೆ ಮನಮುಟ್ಟುವಂತೆ ತಲುಪಿಸಬೇಕು ಎಂದು ಹೇಳಿದರು.
ಮಾಜಿ ಪ್ರಧಾನಿ ವಾಜಪೇಯಿ ಮತ್ತು ಎಲ್.ಕೆ. ಆಡ್ವಾಣಿ ಕಂಡ ಕನಸು ಇಂದು ನರೇಂದ್ರಮೋದಿಯವರ ನೇತೃತ್ವದಲ್ಲಿ ಸಮರ್ಥ, ಸಶಕ್ತ ಭಾರತ ನಿರ್ಮಾಣವಾಗುತ್ತಿದೆ ಎಂದರು.
ಸಚಿವ ಭೈರತಿ ಬಸವರಾಜ್ ಮಾತನಾಡಿ, ಹಿಂದುಳಿದ ವರ್ಗದಲ್ಲಿ ಜನಿಸಿ, ಗ್ರಾಮ ಪಂಚಾಯಿತಿಯಿಂದ ಇಂದು ಸಚಿವನಾಗಿ ಕಾರ್ಯನಿರ್ವಹಿಸಿದ ಬಗ್ಗೆ ಹೆಮ್ಮೆ ಆನಿಸುತ್ತಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ವರ್ಗದವರು ಇದ್ದಾರೆ. ಆಯಾ ಕ್ಷೇತ್ರದಲ್ಲಿ ಸಂಘಟನೆ ಮಾಡಿ, ಮುಂದಿನ ಬಜೆಟ್‌ನಲ್ಲಿ ಹಿಂದುಳಿದ ವರ್ಗದ ಜನರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತಿಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಹಿಂದುಳಿದ ವರ್ಗದ ಮುಖಂಡ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯ ಎ.ಹೆಚ್. ಬಸವರಾಜ್, ಗೋಪಿನಾಥ್ ರಾಜು, ಗೋವಿಂದರಾಜು, ಎಂ.ಸಿ.ಶ್ರೀನಿವಾಸ್ ಗೋವಿಂದನಾಯ್ದು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















