ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಜ್ವರ ಕೂಡಾ ಇತ್ತು. ಈ ಹಿನ್ನೆಲೆ ವೈದ್ಯರ ಸೂಚನೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಾಗಿದ್ದಾರೆ.
Get In Touch With Us info@kalpa.news Whatsapp: 9481252093
















