ಬೆಂಗಳೂರು: ಸಿದ್ದರಾಮಯ್ಯ ಅವರ ವಿಚಾರದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿರುವ ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಬಿಜೆಪಿಗರಿಂದಲೇ ಟೀಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಕುಂದಗೋಳ ವಿಧಾನಸಭಾ ಉಪಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು, ಈ ಬಗ್ಗೆ ಅಂದಿನ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದೆ. ಆದರೆ, ಇದಕ್ಕೆ ನಾನು ಏನು ಮಾಡಬೇಕು ಎಂದಿದ್ದರು. ಅವರ ಈ ಪ್ರತಿಕ್ರಿಯೆ ಕೇಳಿ ನನಗೆ ಆಘಾತವಾಗಿತ್ತು ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾತನಾಡಿದ್ದ ಈಶ್ವರಪ್ಪ, ಒಂದು ವೇಳೆ ಸಿದ್ದರಾಮಯ್ಯ ಅವರ ಮೊಮ್ಮಗಳ ಮೇಲೆ ಅತ್ಯಾಚಾರ ನಡೆದರೇ ಏನು ಮಾಡುತ್ತಾರೆ ಎಂಬ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸೋಲುವ ಭಯದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆ.ಎಸ್. ಈಶ್ವರಪ್ಪ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೋಲಿನ ಭೀತಿಯಲ್ಲಿರುವ ಮೋದಿಯವರಿಂದ ಹಿಡಿದು ಈಶ್ವರಪ್ಪನವರವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ ಎಂದಿದ್ದಾರೆ.
Discussion about this post