ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸಾಗರದಲ್ಲಿ ಮಂಗನ ಕಾಯಿಲೆ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ದೋರಣೆ ಅನುಸರಿಸುತ್ತಿದ್ದು. ಅಸಹಾಯಕ ರಾಗಿದ್ದಾರೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ವಿಧಾನ ಸಭೆಯಲ್ಲಿ ಗಮನಸಳೆದಿದ್ದಾರೆ.
ಸೋಮವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಮಂಗನ ಕಾಯಿಲೆಯಿಂದ ಇದುವರೆಗೂ ಅನೇಕ ಜನರು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮಂಗನ ಕಾಯಿಲೆ ಅತಿಯಾಗಿ ಹರಡಿರುವ ಪ್ತದೇಶದ ಹೋಬಳಿ ಮಟ್ಟದಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿ. ಈ ಕಾಯಿಲೆಗೆ ತುತ್ತಾದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಅದು ಸಾವಿನ ಕೂಪವಾಗಿದೆ. ಕಳೆದ ವರ್ಷ ಮಣಿಪಾಲ್’ನಲ್ಲಿ ಮಂಗನ ಕಾಯಿಲೆಗೆ ದಾಖಲಾಗಿ ಚಿಕಿತ್ಸೆ ಪಡೆದವರಿಗೆ ಸರ್ಕಾರದಿಂದ ಆಸ್ಪತ್ರೆಗೆ ನೀಡಬೇಕಾದ 8 ಲಕ್ಷ ರೂಪಾಯಿ ಹಣವನ್ನು ಇದುವರೆಗೂ ನೀಡಿಲ್ಲ. ಈಗ ಚಿಕಿತ್ಸೆಗೆ ದಾಖಲಾಗಿರಾದವರಿಗೆ ಕಳೆದ ವರ್ಷದ ಹಣ ಬಂದಿಲ್ಲ ಎಂದು ಆಸ್ಪತ್ರೆಯವರು ಹೇಳುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು, ಸೇರಿದಂತೆ ಎಲ್ಲ ಅಧಿಕಾರಿಗಳು ಈ ವಿಚಾರದಲ್ಲಿ ಅಸಹಾಯಕರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವರ್ಷ ಸಾಗರದಲ್ಲಿಯೇ ಪ್ರಯೋಗಾಲಯ ಮಾಡುವುದಾಗಿ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಆದರೆ ಇದುವರೆಗೆ ಆಸ್ಪತ್ರೆ ಮತ್ತು ಪ್ರಯೋಗಾಲಯದ ವ್ಯವಸ್ಥೆಯಾಗಿಲ್ಲ. ಈ ಬಗ್ಗೆ ಸಂಬಂಧ ಪಟ್ಟ ಆರೋಗ್ಯ ಇಲಾಖೆಯ ಪ್ರಧಟನ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ಶ್ರೀರಾಮುಲು, ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಸ್ಥಳೀಯ ಶಾಸಕರಾದ ಹಾಲಪ್ಪ ಅವರ ಜತೆ ಸಭೆ ನಡೆಸಲಾಗುವುದು. ಸಾಗರದಲ್ಲಿಯೇ ಲ್ಯಾಬ್ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಆರೋಗ್ಯಾಧಿಕಾರಿಗಳು ಔಷಧಿ ಖರೀದಿ ಮಾಡುವಂತೆ ಆದೇಶ ಮಾಡಲಾಗುವುದು ಎಂದು ತಿಳಿಸಿದರು.
ಈ ವಿಚಾರದಲ್ಲಿ ನಿರ್ಲಕ್ಷ್ಯ ದೋರಣೆ ತೋರುತ್ತಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
Get in Touch With Us info@kalpa.news Whatsapp: 9481252093
Discussion about this post