No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿವಮೊಗ್ಗ | ವಿಶ್ವ ಔಷಧ ತಜ್ಞರ ದಿನಾಚರಣೆ ಉದ್ಘಾಟನೆ

ಬದುಕಿಗೆ ಭರವಸೆಯಾಗಬೇಕಾದ ಔಷಧ ನಕಲಿಯಾಗದಂತೆ ಎಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ

kalpa News by kalpa News
September 27, 2026
in News, ಶಿವಮೊಗ್ಗ
0
fake medicine warning dc prabhuling kavalikatti
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೋಗಿಯ ಬದುಕಿಗೆ ಭರವಸೆಯಾಗಬೇಕಾದ ಔಷಧವೇ ನಕಲಿಯ ರೂಪದಲ್ಲಿ ಆತನ ಜೀವಕ್ಕೆ ಅಪಾಯ ತಂದೊಡ್ಡುವುದು ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಗಂಭೀರ ವಿಚಾರವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ ಹಾಗೂ ಜಿಲ್ಲಾ ಔಷಧ ತಜ್ಞರ ಸಂಘದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಔಷಧ ತಜ್ಞರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಫಾರ್ಮಸಿಸ್ಟ್ (Pharmacist) ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಒಬ್ಬ ವ್ಯಕ್ತಿ ಅನಾರೋಗ್ಯದ ವಿರುದ್ಧ ಹೋರಾಡುತ್ತಾ, ಔಷಧದ ಮೇಲಿನ ನಂಬಿಕೆಯಿಂದ ತನ್ನ ಬದುಕನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ ಆತನ ಕೈಗೆ ನಕಲಿ ಔಷಧ (Fake Medicine) ತಲುಪಿ ಜೀವಕ್ಕೆ ಅಪಾಯ ಎದುರಾಗುವುದು ಅತ್ಯಂತ ವಿಷಾದನೀಯ ಎಂದು ಹೇಳಿದರು.

dk shivakumar led karnataka government 100 days celebration

ಔಷಧದ ಗುಣಮಟ್ಟ ಕಾಪಾಡುವುದು ಸಾಮಾಜಿಕ ಹೊಣೆಗಾರಿಕೆ

ಔಷಧವೆಂದರೆ ಕೇವಲ ಒಂದು ವಸ್ತುವಲ್ಲ. ಅದು ರೋಗಿಯ ಬದುಕಿನ ಮೇಲಿರುವ ನಂಬಿಕೆಯ ಪ್ರತೀಕವಾಗಿದೆ. ಆ ನಂಬಿಕೆಗೆ ಧಕ್ಕೆ ಬಾರದಂತೆ ಔಷಧಗಳ ಗುಣಮಟ್ಟವನ್ನು ಕಾಪಾಡುವುದು ಪ್ರತಿಯೊಬ್ಬ ಫಾರ್ಮಸಿಸ್ಟ್‌ನ ವೃತ್ತಿಪರ ಕರ್ತವ್ಯದ ಜತೆಗೆ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಔಷಧ ಕ್ಷೇತ್ರವು ಇಂದು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗುಣಮಟ್ಟದ ಔಷಧಗಳ ಲಭ್ಯತೆ, ಅವುಗಳ ಸರಿಯಾದ ಸಂಗ್ರಹಣೆ, ವಿತರಣೆ ಹಾಗೂ ನಿಯಂತ್ರಣ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಲಪಡಿಸುವ ಅಗತ್ಯವಿದೆ ಎಂದರು.

ಔಷಧ ನಿಯಂತ್ರಣ ಮತ್ತು ಮೇಲ್ವಿಚಾರಣಾ ಕ್ಷೇತ್ರದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ನಕಲಿ ಔಷಧಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಡೆಯಲು ಸಂಬಂಧಿಸಿದ ಎಲ್ಲ ಇಲಾಖೆಗಳು ಹಾಗೂ ವೃತ್ತಿಪರರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.Kalahamsa Infotech private limited

Fake Medicine: ನಕಲಿ ಔಷಧ ಕಂಡುಬಂದರೆ ಮಾಹಿತಿ ನೀಡಿ

ನಕಲಿ ಅಥವಾ ಅನುಮಾನಾಸ್ಪದ ಔಷಧಗಳ ಕುರಿತು ಯಾವುದೇ ಮಾಹಿತಿ ಸಾರ್ವಜನಿಕರ ಗಮನಕ್ಕೆ ಬಂದರೆ ಅದನ್ನು ನಿರ್ಲಕ್ಷಿಸದೆ ಕೂಡಲೇ ಆರೋಗ್ಯ ಇಲಾಖೆ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಪ್ರಭುಲಿಂಗ ಕವಳಿಕಟ್ಟಿ ಮನವಿ ಮಾಡಿದರು.

ಸಮಯೋಚಿತವಾಗಿ ಮಾಹಿತಿ ನೀಡುವುದರಿಂದ ದೊಡ್ಡ ಅಪಾಯವನ್ನು ಆರಂಭದಲ್ಲಿಯೇ ತಡೆಯಲು ಸಾಧ್ಯವಾಗುತ್ತದೆ. ನಕಲಿ ಔಷಧಗಳ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಪ್ರಯತ್ನಗಳ ಜತೆಗೆ ಫಾರ್ಮಸಿಸ್ಟ್‌ಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ ಎಂದರು.

Also Read>> ಶಿವಮೊಗ್ಗ | ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟನೆ

ಸರ್ಕಾರ, ಫಾರ್ಮಸಿಸ್ಟ್‌ಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಆರೋಗ್ಯ ಸುರಕ್ಷತೆಯ ಬಲಿಷ್ಠ ವ್ಯವಸ್ಥೆಯನ್ನು ನಿರ್ಮಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.

ಉತ್ತಮ ಫಾರ್ಮಸಿಸ್ಟ್ ಪ್ರಶಸ್ತಿ ಪ್ರದಾನ

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ‘ಉತ್ತಮ ಫಾರ್ಮಸಿಸ್ಟ್’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ಶ್ರೀನಾಥ್ ಹಾಗೂ ಔಷಧ ಮಾರಾಟ ಕ್ಷೇತ್ರದಲ್ಲಿನ ಸೇವೆಗಾಗಿ ಭೂಪಾಳಂ ಶಂಕರ ಪ್ರದೀಪ್ ಅವರಿಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ‘ಉತ್ತಮ ಫಾರ್ಮಸಿಸ್ಟ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಎನ್. ಶ್ರೀಹರ್ಷ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ಕೆ.ಎನ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಹಾಯಕ ಔಷಧ ನಿಯಂತ್ರಕರಾದ ಡಾ. ವೀರೇಶ್ ಬಾಬು, ವಿಶಾಲಾಕ್ಷಿ ವಿ., ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಮಧುಕರ ಶೆಟ್ಟಿ ಹಾಗೂ ಜಿಲ್ಲಾ ಔಷಧ ತಜ್ಞರ ಸಂಘದ ಗಣೇಶ್ ಎಸ್. ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

PES Shivamogga

Kalpa News Advertising Disclaimer

Tags: Fake MedicineShivamoggaWorld Pharmacist Dayನಕಲಿ ಔಷಧಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟನೆ

kalpa News

kalpa News

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL