ನವದೆಹಲಿ: ಬಾಲಾಕೋಟ್ ಮೇಲೆ ಭಾರತೀಯ ವಾಯುಸೇನೆ ನಡೆಸಿದ ದಾಳಿ ಬಗ್ಗೆ ಸಾಕ್ಷಿ ಬೇಕು ಎಂದು ನಾವು ಕೇಳುತ್ತಿಲ್ಲ. ಆದರೆ, ಹುತಾತ್ಮ ಯೋಧರ ಕುಟುಂಬಸ್ಥರು ಕೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಭಿನ್ನ ಹೇಳಿಕೆ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ನಾನು ವಾಯುದಾಳಿ ಕುರಿತಾಗಿ ಹೆಚ್ಚಿಗೆ ಏನೂ ಮಾತನಾಡುವುದಿಲ್ಲ. ಆದರೆ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸಿಆರ್’ಪಿಎಫ್ ಯೋಧರ ಕುಟುಂಬಸ್ಥರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ನಾವು ಈ ವಿಚಾರದಲ್ಲಿ ಬಹಳಷ್ಟು ನೊಂದಿದ್ದೇವೆ. ಹೀಗಾಗಿ, ನಮಗೆ ಅದನ್ನು ಖಾತ್ರಿ ಪಡಿಸಿ ಎಂದು ಕುಟುಂಬಸ್ಥರು ಕೇಳುತ್ತಿದ್ದಾರೆ. ಹೀಗಾಗಿ, ನಾವೂ ಸಹ ಕೇಳುತ್ತಿದ್ದೇವೆ ಎಂದವರು ಹೇಳಿದ್ದಾರೆ.
Discussion about this post