ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಅಮೇಥಿಯಲ್ಲಿ ಸೋಲಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ಮುಖಂಡ ಎ.ಕೆ. ಆಂಟನಿ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಹುಲ್ ಗಾಂಧಿಯವರನ್ನು ನಾವೆಲ್ಲರೂ ಒತ್ತಾಯಿಸಿದ್ದು ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ರಾಹುಲ್ ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ದಿನಗಳಿಂದ ಕೇಳಿಬರುತ್ತಿತ್ತು.
ಆದರೆ, ಇನ್ನೊಂದು ಮೂಲಗಳ ಪ್ರಕಾರ ಅಮೇಥಿಯಲ್ಲಿ ರಾಹುಲ್ ಈ ಬಾರಿ ಸೋಲಬಹುದು ಎಂಬ ವರದಿಗಳನ್ನು ಆಧರಿಸಿ, ವಯನಾಡಿನಿಂದಲೂ ಸ್ಫರ್ಧಿಸುತ್ತಿದ್ದಾರೆ ಎನ್ನಲಾಗಿದೆ.
Discussion about this post