No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೆ.22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯ’ | ಭಾನುವಾರ ರಾಘವೇಶ್ವರ ಶ್ರೀಗಳ ಅದ್ದೂರಿ ಪುರಪ್ರವೇಶ

kalpa News by kalpa News
September 20, 2025
in Small Bytes, ಸಾಗರ
0
ಸೆ.22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯ’ | ಭಾನುವಾರ ರಾಘವೇಶ್ವರ ಶ್ರೀಗಳ ಅದ್ದೂರಿ ಪುರಪ್ರವೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸೆ.22 ರಿಂದ ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಆರಂಭಗೊಳ್ಳಲಿರುವ “ನವರಾತ್ರ ನಮಸ್ಯಾ” ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಭಾನುವಾರ ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ದೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಸೆ. 22 ರಿಂದ ನವರಾತ್ರಿ ನಮಸ್ಯಾ ಧಾರ್ಮಿಕ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಪ್ರತಿದಿನ ಮಧ್ಯಾಹ್ನ 3.30 ರಿಂದ 5 ಗಂಟೆಯವರೆಗೆ ಲಲಿತೋಪಾಖ್ಯಾನ ಪ್ರವಚನ ಇರುತ್ತದೆ. ನಂತರ ದೀಪಾಲಂಕಾರ, ದುರ್ಗಾದೀಪ ಪೂಜೆ, ಕುಂಕುಮಾರ್ಚನೆ ಏರ್ಪಡಿಸಲಾಗಿದೆ.

ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನಡೆಯಲಿದೆ. ಏಕಾದಶಿ ದಿನ ವಿಶೇಷ ಶ್ರೀಚಕ್ರ ಆರಾಧನೆ ಇರುತ್ತದೆ.

ಹೊಸನಗರ, ಸಾಗರ, ಸಿದ್ದಾಪುರ ಒಳಗೊಂಡ ಸಾಗರ ಪ್ರಾಂತ್ಯದ ಶಿಷ್ಯಭಕ್ತರ ಸಮಿತಿ ಇದೇ ಪ್ರಥಮ ಬಾರಿ ಸಾಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವಿಜೃಂಭಣೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ.
ನವರಾತ್ರ ನಮಸ್ಯಾಕ್ಕೆ ಸಮಸ್ತರನ್ನು ಆಹ್ವಾನಿಸುವ ಅಕ್ಷತಾಭಿಯಾನ ಒಂದೂವರೆ ತಿಂಗಳ ಹಿಂದೆಯೇ ಆರಂಭಗೊಂಡಿದ್ದು ಮನೆಮನೆಗೆ ಆಹ್ವಾನ ನೀಡುವ ಕಾರ್ಯವನ್ನು ಶ್ರೀಮಠದ ಮಾತೃ ವಿಭಾಗದ ಮಾತೆಯರು ನಡೆಸಿದ್ದಲ್ಲದೆ ಉಡಿ ಸೇವೆಯೂ ಸೇರಿದಂತೆ ಜಗನ್ಮಾತೆಯ ಆರಾಧನೆಗೆ ಪೂರಕವಾಗಿರುವ ಸಕಲ ಸಿದ್ದತೆಗೆ ತಂಡೋಪತಂಡವಾಗಿ ಆಗಮಿಸಿ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯದಲ್ಲಿ ಇಡಿ ಮಹಾಮಂಡಲ ವ್ಯಾಪ್ತಿಯ ಸಾವಿರಾರು ಮಾತಾ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ.

ಇನ್ನು ಧಾರ್ಮಿಕದಿಂದ ಹಿಡಿದು ಸಾಂಸ್ಕøತಿಕದವರೆಗೆ, ಶಬರಿ ಆತಿಥ್ಯದಿಂದ ಹಿಡಿದು ಸೇವಾ ಕೇಂದ್ರದವರೆಗೆ ಗಣ್ಯರಾಗಮನದ ಸ್ವಾಗತದಿಂದ ಹಿಡಿದು ಪ್ರಸಾದ ವಿತರಣೆಯವರೆಗೆ ಸಮಿತಿಯಿಂದ ರೂಪುಗೊಂಡಿರುವ 14 ವಿಭಾಗದ ಸಂಚಾಲಕರು ಅವರೊಂದಿಗೆ ಪ್ರತಿ ಸಂಚಾಲಕರ ತಂಡದಲ್ಲಿ ತಲಾ 10 ಸಹ ಸಂಚಾಲಕರು ಹೀಗೆ 500 ಹೆಚ್ಚು ಕಾರ್ಯಕರ್ತರು ಈ ನವರಾತ್ರ ಸಮಸ್ಯಾ ಕಾರ್ಯಕ್ರಮದಲ್ಲಿ ಸೇವೆ ಮಾಡಲಿದ್ದಾರೆ.

ಈಗಾಗಲೆ ಧಾರ್ಮಿಕ ಕಾರ್ಯಕ್ರಮಕ್ಕೆ ಅಗತ್ಯವಿರುವ ಹಾಗೂ ಪ್ರಸಾದ ಭೋಜನದ ವ್ಯವಸ್ಥೆಗೂ ಸೇರಿ ಅಪಾರ ಸಂಖ್ಯೆಯ ಶಿಷ್ಯ ಭಕ್ತರು ಹೊರೆಗಾಣಿಕೆ ರೂಪದಲ್ಲಿ ಸುವಸ್ತುಗಳನ್ನು ಸಮರ್ಪಿಸುತ್ತಿರುವುದು ವಿಶೇಷವಾಗಿ ಕಂಡು ಬರುತ್ತಿದೆ. 15 ದಿನಗಳ ಸೇವೆಗಾಗಿ ವಿವಿಧ ಭಾಗದಿಂದ ಕಾರ್ಯಕರ್ತರು ಹೆಸರು ನೊಂದಾಯಿಸಿಕೊಳ್ಳುತ್ತಿದ್ದಾರೆ.ನವರಾತ್ರ ನಮಸ್ಯಾ ಪೂರ್ಣ ಸಿದ್ದತೆಯನ್ನು ಶುಕ್ರವಾರ ಸಮಿತಿಯ ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ ಶಿಕಾರಿಪುರ ಅವರು ಸಂಚಾಲನ ತಂಡದ ಪ್ರಮುಖರೊಂದಿಗೆ ವೀಕ್ಷಿಸಿದರು. ಹಾಗೂ ಈ ವೇಳೆ ಮಾತನಾಡಿದ ಅವರು ಲೋಕಕಲ್ಯಾಣಾರ್ಥವಾಗಿ ಸಂಕಲ್ಪಗೊಂಡು ಸಾಗರದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾದಲ್ಲಿ ಸಮಸ್ತರು ಪಾಲ್ಗೊಳ್ಳಬೇಕು ಎಂದು ಪ್ರೀತಿಯ ಕರೆ ನೀಡಿದ್ದಾರೆ. ಈ ವೇಳೆ ಕ್ರಿಯಾ ಸಮಿತಿಯ ಸಂಚಾಲಕ ಮುರಳಿ ಗೀಜಗಾರು, ಸಂಯೋಜಕ ಶಿವರಾಮಯ್ಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ಕೆರೆಕೈ , ಗುರುಪಾದ ಭೀಮನಕೋಣೆ ಸೇರಿದಂತೆ ವಿವಿಧ ವಿಭಾಗದ ಸಂಚಾಲಕರು ಇದ್ದರು.

ಭಾನುವಾರ ಪುರ ಪ್ರವೇಶ
ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯಸಾನ್ನಿಧ್ಯವಹಿಸಲಿರುವ ಶ್ರೀರಾಘವೇಶ್ವರ ಭಾರತೀ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ಶನಿವಾರ ಸಂಜೆ 5.30 ಗಂಟೆಗೆ ಇಲ್ಲಿನ ಶಾರದಾಂಬ ವೃತ್ತದಿಂದ ಆಯೋಜಿಸಲಾಗಿದೆ. ಅಲ್ಲಿಂದ ಚಾಮರಾಜಪೇಟೆ ಮಾರ್ಗವಾಗಿ ಗಣಪತಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ.

500 ಕ್ಕೂ ಹೆಚ್ಚು ಮಾತೆಯರಿಂದ ಪೂರ್ಣ ಕುಂಭ ಸ್ವಾಗತ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳಿಂದ ನಾದಸ್ವರ ವಾದನ, ಪ್ರಸಿದ್ದ ಮೂರು ಚಂಡೆ ತಂಡಗಳಿಂದ ಚೆಂಡೆ ವಾದನ, ಶ್ರೀರಾಮನ ಆಕೃತಿಯ ವಿಶೇಷ ಮೂರ್ತಿಯ ಆಕರ್ಷಣೆ, ಹಾಗೂ ಸಾಗರ ನಗರದ ವಿವಿಧ ಸಮಾಜದ 20 ಕ್ಕೂ ಹೆಚ್ಚು ತಂಡಗಳಿಂದ ಭಜನೆ, ಮತ್ತು ವಿಶೇಷವಾಗಿ ಕುಂದಾಪುರ ಶಿರೂರಿನ ಪರಿಣಿತ ಕಲಾವಿದರಿಂದ ನೃತ್ಯ ಭಜನಾ ತಂಡ ಈ ಪುರಪ್ರವೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಪುರ ಪ್ರವೇಶ ಮತ್ತು ನಗರಾಲಂಕಾರ ಸಂಚಾಲಕ ಕೆ.ಆರ್. ಗಣೇಶ್‍ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsLatest NewsRaghaveshwara Bharathi ShriSagarShivamogga NewsShivmaoggaನವರಾತ್ರಿ ನಮಸ್ಯಾಶಂಕರಾಚಾರ್ಯಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀ ರಾಮಚಂದ್ರಾಪುರ ಮಠಸಾಗರಹೊಸನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ನಟ ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ

Next Post

ರಾಘವೇಶ್ವರ ಶ್ರೀಗಳ ಕೃಪೆ ಧರ್ಮಸ್ಥಳ ಕ್ಷೇತ್ರದ ಮೇಲಿದೆ | ಡಾ. ವೀರೇಂದ್ರ ಹೆಗ್ಗಡೆ

kalpa News

kalpa News

Next Post
ರಾಘವೇಶ್ವರ ಶ್ರೀಗಳ ಕೃಪೆ ಧರ್ಮಸ್ಥಳ ಕ್ಷೇತ್ರದ ಮೇಲಿದೆ | ಡಾ. ವೀರೇಂದ್ರ ಹೆಗ್ಗಡೆ

ರಾಘವೇಶ್ವರ ಶ್ರೀಗಳ ಕೃಪೆ ಧರ್ಮಸ್ಥಳ ಕ್ಷೇತ್ರದ ಮೇಲಿದೆ | ಡಾ. ವೀರೇಂದ್ರ ಹೆಗ್ಗಡೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL