ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಕೊಪ್ಪ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ತುಂಗಾ ನದಿ ತುಂಬುವ ಹಂತಕ್ಕೆ ಬಂದಿದೆ.
ಗಾಜನೂರು ಅಣೆಕಟ್ಟೆಯಿಂದ 11 ಕ್ರಸ್ಟ್ ಗೇಟ್ ಮೂಲಕ 25 ಸಾವಿರ ಕ್ಯೂಸೆಕ್ಸ್ ನೀರು ಹೊರಕ್ಕೆ ಬಿಡುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ತುಂಬಿ ಹರಿಯುತ್ತಿದ್ದು, ನಗರದ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಮುಳುಗಲು ಇನ್ನು ಕೇವಲ ಎರಡು ಅಡಿ ಮಾತ್ರ ಬಾಕಿ ಇದೆ.
Get In Touch With Us info@kalpa.news Whatsapp: 9481252093
















