ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಆವೇಶದಲ್ಲಿ ವಿವಾದಾತ್ಮಕ ಫೋಟೋಗಳನ್ನು ಹಾಕಿ, ಪ್ರಧಾನಿಯವರನ್ನು ಕಳ್ಳ ಎಂದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ, ನಟಿ ರಮ್ಯಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರಫೇಲ್ ಒಪ್ಪಂದ ವಿವಾದಕ್ಕೆ ಸಂಬಂಧಿಸಿ ರವ್ಯಾ ಪ್ರಧಾನಿ ಮೋದಿ ಅವರನ್ನು ಟೀಕಿಸಿ ರವ್ಯಾ ಮಾಡಿದ ಟ್ವೀಟ್ ಮಾಡಿದ್ದರು. ಈ ಟ್ವೀಟ್ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ತೀವ್ರ ಕಿಡಿ ಕಾರಿದ್ದರು.
ಇದರ ಬೆನ್ನಲ್ಲೇ, ಲಕ್ನೋ ಮೂಲದ ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಎನ್ನುವವರು ಗೋಮತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಸೆಕ್ಷನ್ 67 ಮಾಹಿತಿ ತಂತ್ರಜ್ಞಾನ ತಿದ್ದುಪಡಿ ಕಾಯ್ದೆ, 2008 ಮತ್ತು ಸೆಕ್ಷನ್ 124ಎ ಅಡಿ ಎಫ್ಐಆರ್ ದಾಖಲಿಸಿದ್ದಾರೆ.
Discussion about this post