ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ತೀವ್ರಗೊಂಡ ಬೆನ್ನಲ್ಲೇ, ಹಿಂದೂ ಧರ್ಮವನ್ನು ಅವಹೇಳನ ಮಾಡಿದ ನಗರದ ಕೆಲವು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್’ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
ಬೆಂಗಳೂರಿನ ಸರ್ಕಾರಿ ಕಲಾ ವಿಜ್ಞಾನ ಕಾಲೇಜು ಆವರಣದಲ್ಲಿ ಈ ಪ್ರತಿಭಟನೆ ನಡೆದಿದ್ದು, ಈ ಕುರಿತಂತೆ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ಕಾಲೇಜು ಆವರಣವನ್ನು ಅಕ್ರಮವಾಗಿ ಪ್ರವೇಶಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ದೂರು ನೀಡಿರುವ ಅವರು, ಪ್ರತಿಭಟನೆ ನಡೆಸಿದವರು ಯಾರೂ ನಮ್ಮ ಕಾಲೇಜಿನವರಲ್ಲ. ಬದಲಾಗಿ ಹೊರಗಿನಿಂದ ಬಂದವರು ಪ್ರತಿಭಟನೆ ನಡೆಸಿದ್ದು, ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಗೂ ಘೋಷಣೆಗಳನ್ನು ಕೂಗಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ದೂರಿನ ಹಿನ್ನೆಲೆಯಲ್ಲಿ ಎಂಟು ವಿದ್ಯಾರ್ಥಿಗಳ ವಿರುದ್ಧ ಎಫ್’ಐಆರ್ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸಿಪಿ ಚಂದ್ರಶೇಖರ್ ಅವರು ಇಂದು ಕಾಲೇಜು ಆವರಣಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post