ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್’ನಲ್ಲಿ ಶಾರ್ಟ್ ಸರ್ಕಿಟನಿಂದಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು.
ಹೆರಿಗೆ ಎಮರ್ಜೆನ್ಸಿ ವಾರ್ಡ್’ನಲ್ಲಿ ಬೆಂಕಿ ಹೊತ್ತಿಕೊಂಡು ಬಾರಿ ಹೊಗೆ ಕಾಣಿಸಿಕೊಂಡಿದ್ದು, ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ಆದರೆ ಹೆರಿಗೆಯಾದ ಮಹಿಳೆಯರು ಶಿಶುಗಳನ್ನು ಹೊತ್ತಿಕೊಂಡು ಹೊರಕ್ಕೆ ಓಡಿ ಬಂದಿದ್ದಾರೆ.
ಅಗ್ನಿ ಶಾಮಕ ದಳ ಸ್ಥಳಕ್ಕೆ ತೆರಲಿದೆ. ಮೆಗ್ಗಾನ್ ಅಧೀಕ್ಷಕ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

















