Read - < 1 minute
ಬೆಂಗಳೂರು: ಇಲ್ಲಿನ ಎಂಜಿ ರಸ್ತೆಯಲ್ಲಿರುವ ಯುಕೋ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆದಿದೆ.
ಬ್ಯಾಂಕ್’ನ ಎರಡನೆಯ ಮಹಡಿಯಲ್ಲಿ ಅವಘಡ ಸಂಭವಿಸಿದ್ದು, ಒಳಗಡೆ ಹಲವು ಮಂದಿ ಸಿಲುಕಿದ್ದಾರೆ.
5 ಅಗ್ನಿ ಶಾಮಕ ವಾಹನಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎರಡನೇ ಮಹಡಿಯಲ್ಲಿದ್ದ ಜನರು ಭಯಬೀತರಾಗಿ ಹೊರಗೆ ಓಡಿ ಬಂದಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡಕ್ಕೆ ಕಾರಣ ಎನ್ನಲಾಗಿದೆ.
Discussion about this post