ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಪುಣೆ: ಕೋವಿಶೀಲ್ಡ್ ಕೊರೋನಾ ಲಸಿಕೆ ತಯಾರಿಕೆ ನಿರತವಾಗಿರುವಂತಹ ಸೀರಂ ಇನ್ಸಿಟ್ಯೂಟ್ ಆಫ್ ಇಂಡಿಯಾದಲ್ಲಿ ಇದೀಗ ಅಗ್ನಿ ಅವಘಡ ಉಂಟಾಗಿದೆ.
ಪುಣೆಯ ಸೀರಂ ಇನ್ಸಿಟಿಟ್ಯೂಟ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋವಿಶೀಲ್ಡ್ ಲಸಿಕೆ ತಯಾರಿಸುತ್ತಿರೋ ಸಂಸ್ಥೆಯ 2ನೆಯ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಪ್ರಸ್ತುತ ಅಗ್ನಿ ಅವಘಡ ಸಂಭವಿಸಿರುವುದು ನಿರ್ಮಾಣ ಹಂತದ ಕಟ್ಟಡದಲ್ಲಿ. ಅಲ್ಲಿ ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಕೆಲಸ ನಡೆಯುತ್ತಿರಲಿಲ್ಲ. ಹೀಗಾಗಿ ಲಸಿಕೆ ತಯಾರಿಕೆಯ ಮೇಲೆ ಅಗ್ನಿ ಅವಘಡದಿಂದ ಯಾವುದೇ ರೀತಿಯ ಪರಿಣಾಮವಾಗುವುದಿಲ್ಲ ಎಂದು ಸಂಸ್ಥೆ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post