ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಜಮ್ಮು ಕಾಶ್ಮೀರದ ಹಂದ್ವಾರ ಪ್ರದೇಶದಲ್ಲಿ ಇಂದು ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಕರ್ನಲ್, ಓರ್ವ ಮೇಜರ್ ಸೇರಿ ಐವರು ಯೋಧರು ವೀರಸ್ವರ್ಗ ಸೇರಿದ್ದಾರೆ.
ಹಂದ್ವಾರದ ಚಂಜ್ಮುಲ್ಲಾ ಪ್ರದೇಶದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಐವರು ಯೋಧರು ವೀರಸ್ವರ್ಗ ಸೇರಿದ್ದರೆ, ಇಬ್ಬರು ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ.
ಈ ಪ್ರದೇಶದಲ್ಲಿ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಸೇನೆ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಸೇನೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಇಲ್ಲಿನ ಮನೆಗೆ ನುಗ್ಗಿದ್ದ ಉಗ್ರರು ಸ್ಥಳೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಆದರೆ, ಉಗ್ರರಿಂದ ಅವರನ್ನು ಬಿಡಿಸಿ, ಸುರಕ್ಷಿತ ಸ್ಥಳಕ್ಕೆ ಕಳುಹಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
Get in Touch With Us info@kalpa.news Whatsapp: 9481252093
Discussion about this post