ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ಮಾರಕ ಕೊರೋನಾ ವೈರಸ್’ಗೆ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದ್ದು, ಮಧುರೈನಲ್ಲಿ 54 ವರ್ಷದ ವ್ಯಕ್ತಿಯೋರ್ವರು ಮೃತರಾಗಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಇದು ಮೊದಲ ಕೊರೋನಾ ವೈರಸ್ ಸಾವು ಪ್ರಕರಣವಾಗಿದೆ. ದೇಶದಲ್ಲಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದೆ.
#update: Despite our best efforts, the #COVID19 +ve Pt at MDU, #RajajiHospital, passed away few minutes back.He had medical history of prolonged illness with steroid dependent COPD, uncontrolled Diabetes with Hypertension.@MoHFW_INDIA @CMOTamilNadu #Vijayabaskar
— Dr C Vijayabaskar (@Vijayabaskarofl) March 24, 2020
ಈ ಕುರಿತಂತೆ ಅಲ್ಲಿನ ಆರೋಗ್ಯ ಸಚಿವ ವಿಜಯಭಾಸ್ಕರ್ ಟ್ವೀಟ್ ಮಾಡಿದ್ದು, ಮಾರಣಾಂತಿಕ ಕೋವಿಡ್ 19 ಸೋಂಕಿಗೆ ತಮಿಳುನಾಡಿನ 54ವರ್ಷದ ವ್ಯಕ್ತಿಯೊಬ್ಬರು ಬುಧವಾರ ನಸುಕಿನ ವೇಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದೆ. ಅಲ್ಲದೇ ತಮಿಳುನಾಡಿನಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ ಎಂದಿದ್ದಾರೆ.
ತಮಿಳುನಾಡಿನಲ್ಲಿ ಮತ್ತೆ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್’ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post