ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಾವಣಗೆರೆ: ಮೊನ್ನೆ ಮೊನ್ನೆಯವರೆಗೂ ಗ್ರೀನ್ ಝೋನ್’ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ 69 ವರ್ಷದ ವೃದ್ಧ ಬಲಿಯಾಗಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ರಾತ್ರಿ ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ನಗರದ ಜಾಲಿನಗರದ ನಿವಾಸಿಯಾಗಿದ್ದ ಈ ವೃದ್ಧನನ್ನು ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಲಾಗಿ, ಕೊರೋನಾ ದೃಢಪಟ್ಟಿತ್ತು. ಆದರೆ, ಈ ವ್ಯಕ್ತಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಯಕ್ಷಪ್ರಶ್ನೆಯಾಗಿದ್ದು, ಈತನ ಕುಟುಂಬಸ್ಥರೆಲ್ಲಿಗೂ ಈಗ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
Get in Touch With Us info@kalpa.news Whatsapp: 9481252093
Discussion about this post