ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಾವಣಗೆರೆ: ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಯೋಜನೆಗೆ ಚಾಲನೆ ನೀಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಇಂತಹ ಒಂದು ವಿನೂತನ ಯೋಜನೆಗೆ ಗಾಂಧಿ ನಗರದಲ್ಲಿ ಇರುವ ಚೌಡೇಶ್ವರಿ ದೇವಾಲಯದ ಬಳಿ ಚಾಲನೆ ನೀಡಿದರು.
ಇದೇ ವೇಳೆ, ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ ನೀಡಿದರು.
ಜನನ/ ಮರಣ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ ಶಾಸಕ ಎಸ್.ಎ. ರವೀಂದ್ರನಾಥ ಚಾಲನೆ ನೀಡಿದರೆ, ಮನೆ ಕಂದಾಯ ಸ್ವಿಕೃತಿ ಕಾರ್ಯಕ್ರಮಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್ ವಹಿಸಿದ್ದರು. ಜಿಲ್ಲೆಯ ಹಲ ಶಾಸಕರು, ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post