ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗಕ್ಕೆ ಮೊಟ್ಟ ಮೊದಲ ಬಾರಿಗೆ ಸಂಚಾರ ಆರಂಭಿಸುತ್ತಿರುವ ಇಂಡಿಗೋ ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದು, ಮಲೆನಾಡಿಗರಲ್ಲಿ ಸಂತಸ ಮನೆ ಮಾಡಿದೆ.


ಮೊದಲ ಇಂಡಿಗೋ ವಿಮಾನದಲ್ಲಿ ಸಚಿವ ಎಂ.ಬಿ. ಪಾಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ.ಎಸ್. ಅರುಣ್, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ, ಸಾಗರದ ಶಾಸಕ ಗೋಪಾಲ ಕೃಷ್ಣ ಬೇಳೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಗೋಪಿನಾಥ್ ಸೇರಿದಂತೆ ಹಲವರು ಮೊದಲ ವಿಮಾನದಲ್ಲಿ ಆಗಮಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post