ಗೌರಿಬಿದನೂರು: ನಗರದ ಶ್ರೀಮತಿ ಸ್ಟೆಲ್ಲಾ ಕಾನ್ವೆಂಟ್’ನ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ್ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂಧಿಸಿದ್ದಾರೆ. ಬಳಿಕ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಕೆ.ಆರ್. ಸಪ್ತಗಿರಿ, ಮಕ್ಕಳು ನಿತ್ಯದ ಚಟುವಟಿಕೆಗಳ ಜೊತೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಯಾಗಿ ವಯೋಮಾನಕ್ಕೆ ತಕ್ಕಂತೆ ಬುದ್ಧಿಶಕ್ತಿ ಬೆಳೆವಣಿಗೆಯಾಗಲು ಸಹಕಾರಿಯಾಗುತ್ತದೆ. ಇದಕ್ಕಾಗಿ ಶಾಲೆಯಲ್ಲಿ ಶಿಕ್ಷಕರು ಮತ್ತು ಮನೆಯಲ್ಲಿ ಪೋಷಕರು ಹೆಚ್ಚಿನ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಬೇಕಾಗಿದೆ ಎಂದರು.
ಇದೇ ಶಾಲೆಯ ಪ್ರಾಥಮಿಕ ಹಂತದ ಮಕ್ಕಳು ಥ್ರೋ ಬಾಲ್ ಮತ್ತು ಕಬಡ್ಡಿಯಲ್ಲಿ ಪ್ರಥಮ ಸ್ಥಾನದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ವೇಳೆ ದೈಹಿಕ ಶಿಕ್ಷಕರಾದ ಸುನೀಲ್ ಪ್ರಕಾಶ್, ಶಿಕ್ಷಕರಾದ ಲಕ್ಷ್ಮಣ ಮೂರ್ತಿ ಇದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
















