ಅಯೋಧ್ಯೆ: ರಾಮಮಂದಿರ ನಿರ್ಮಾಣ ವಿಚಾರ ತೀವ್ರ ಕಾವು ಪಡೆದುಕೊಂಡಿರುವ ಬೆನ್ನಲ್ಲೇ, ಅಯೋಧ್ಯೆಯಲ್ಲಿ ಮೊದಲು ರಾಮ ಮಂದಿರ ನಿರ್ಮಾಣವಾಗಬೇಕು. ಆನಂತರ ಸರ್ಕಾರದ ವಿಚಾರ ಎಂದು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಮಂದಿರ ನಿರ್ಮಾಣಕ್ಕಾಗಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ನಾಳೆ ಬೃಹತ್ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಆರ್‌ಎಸ್‌ಎಸ್, ವಿಎಚ್‌ಪಿ ಹಾಗೂ ಶಿವಸೇನೆ ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಈಗಾಗಲೇ ಅಯೋಧ್ಯೆಗೆ ಧಾವಿಸುತ್ತಿದ್ದಾರೆ.
Visuals of security in Ayodhya. VHP and Shiv Sena will hold separate events in the city tomorrow over the matter of #RamTemple. pic.twitter.com/cD0PPn0GHI
— ANI UP (@ANINewsUP) November 24, 2018
ಧರ್ಮ ಸಭೆ ಹೆಸರಿನಲ್ಲಿ ನಡೆಯುವ ಈ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ರಾಮಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಇದೇ ವೇಳೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಶಿವಸೇನೆ ಕೂಡ ರಾಮ ಮಂದಿರಕ್ಕೆ ಅಯೋಧ್ಯೆಯಲ್ಲಿ ಭಾನುವಾರವೇ ಪ್ರತ್ಯೇಕ ಸಭೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಅಯೋಧ್ಯೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಇನ್ನು ನಗರದ ಎಲ್ಲೆಡೆ ಕೇಸರಿ ಧ್ವಜಗಳು, ಬ್ಯಾನರ್‌ಗಳು ರಾರಾಜಿಸುತ್ತಿದ್ದು, ಶಿವಸೇನೆ ಪ್ರಮುಖ ನಾಯಕ ಉದ್ಭವ್ ಠಾಕ್ರೆ ಅಯೋಧ್ಯೆಗೆ ಆಗಮಿಸಿದ್ದಾರೆ. ನಾಳೆ ಅಯೋಧ್ಯೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಜಮಾವಣೆಗೊಳ್ಳುವ ಸಾಧ್ಯತೆಗಳಿದ್ದು, ಸೂಪರ್ ಸಂಡೆ ಎಂದು ಪೊಲೀಸರು ಕರೆದಿದ್ದಾರೆ.
ಇನ್ನು ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಕೇವಲ 17 ನಿಮಿಷದಲ್ಲಿ ಬಾಬರಿ ಮಸೀದಿಯನ್ನು ಕೆಡವಿದ್ದೆವು. ಹೀಗಿರುವಾಗ, ರಾಮ ಮಂದಿರ ನಿರ್ಮಾಣ ಮಾಡಲು ಇನ್ನೆಷ್ಟು ಕಾಲವಕಾಶ ಬೇಕು ಎಂದು ಪ್ರಶ್ನಿಸಿದ್ದಾರೆ.
Mumbai: Shiv Sena chief Uddhav Thackeray leaves from his residence. He will reach Uttar Pradesh’s Ayodhya today for a two-day visit. VHP and Shiv Sena will hold separate events in the city tomorrow over the matter of #RamTemple. pic.twitter.com/tPFewtVLVN
— ANI (@ANI) November 24, 2018
ಉತ್ತರ ಪ್ರದೇಶ ಹಾಗೂ ಕೇಂದ್ರ ಎರಡರಲ್ಲೂ ಸಹ ಬಿಜೆಪಿ ಅಧಿಕಾರದಲ್ಲಿದೆ. ಹೀಗಿರುವಾಗ, ಹಿಂದೂಗಳ ಭಾವನೆಗೆ ಬೆಲೆ ನೀಡಿ ಮಂದಿರ ನಿರ್ಮಾಣಕ್ಕಾಗಿ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.
Discussion about this post