ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಡಿಯ ದೇಶದಲ್ಲಿನ ಕಾರ್ಮಿಕ ಸಂಘಗಳ ಪ್ರಥಮ ಮಹಿಳಾ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಜೆ.ಸಿ. ರಾಜಮ್ಮ(87) ಅವರು ಇಂದು ವಿಧಿವಶರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದು, ಐವರು ಸಹೋದರಿಯರು ಹಾಗೂ ಆರು ಸಹೋದರರನ್ನು ಇವರು ಅಗಲಿದ್ದಾರೆ.
ಶ್ರದ್ಧಾಂಜಲಿ
ಸಂಘದ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ, ಹಾಲಿ ಅಧ್ಯಕ್ಷ ಜಗದೀಶ್, ಪ್ರಮುಖರಾದ ಎಸ್. ನರಸಿಂಹಾಚಾರ್, ಮಾಜಿ ಅಧ್ಯಕ್ಷ ಚಂದ್ರಹಾಸ್, ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಲಿಂಗಯ್ಯ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಮೃತರ ಅಂತಿಮ ದರ್ಶನ ಪಡೆದು ಶ್ರದ್ದಾಂಜಲಿ ಸಲ್ಲಿಸಿದರು.
ಅಲ್ಲದೇ, ಕಾರ್ಖಾನೆಗೆ ಹಾಗೂ ಕಾರ್ಮಿಕರಿಗಾಗಿ ರಾಜಮ್ಮ ಅವರು ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಬ್ರಾಹ್ಮಣ ಸಮಾಜದ ತಾಲೂಕು ಅಧ್ಯಕ್ಷರಾದ ಜನಾರ್ಧನ ಅಯ್ಯಂಗಾರ್ ಹಾಗೂ ಪ್ರಮುಖರಾದ ರಮಾಕಾಂತ್, ನಿವೃತ್ತ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಹನುಮಂತರಾವ್, ಶಂಕರ್, ಮಹೇಶಪ್ಪ, ಬಸವರಾಜ್, ಜೈರಾಜ್ ಹಾಗೂ ಕೆಂಪಯ್ಯ ಅವರುಗಳು ಶ್ರದ್ದಾಂಜಲಿ ಅರ್ಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post