ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜನೌಷಧಿ ದಿನಾಚರಣೆ ಅಂಗವಾಗಿ ಮಾರ್ಚ್ 4-7ರವರೆಗೂ ನಗರದ ಸ್ಕಂದ ಟ್ರಸ್ಟ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಜನ್ನಾಪುರದ ಜನೌಷಧಿ ಕೇಂದ್ರ ಮಾಲೀಕರು, ಮಾರ್ಚ್ 3ರಂದು ಸಂಜೆ 6 ಗಂಟೆಗೆ ನಗರದ ಬೈಪಾಸ್ ರಸ್ತೆಯಲ್ಲಿರುವ ಎಂಪಿಎಂ ಬಡಾವಣೆಯ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲಿ ಆರೋಗ್ಯ ಶಿಬಿರ ಹಾಗೂ ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 4ರಂದು ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಾರ್ಚ್ 6ರಂದು ನ್ಯೂಟೌನ್ ಲಯನ್ಸ್ಕ್ಲಬ್ ಸಭಾಂಗಣದಲ್ಲಿ ಹಿರಿಯ ವೈದ್ಯ ಡಾ. ಎಂ. ರವೀಂದ್ರನಾಥ ಕೋಠಿರವರಿಂದ ಉಚಿತ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ ಎಂದಿದ್ದಾರೆ.
ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೇರವಾಗಿ ಜನೌಷಧಿ ಮಾಲೀಕರು ಹಾಗೂ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಲಾಗಿದೆ.
ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ
ಜನ್ನಾಪುರದ ಜನೌಷಧಿ ಕೇಂದ್ರ ಹಾಗೂ ಸ್ಕಂದ ಟ್ರಸ್ಟ್ ವತಿಯಿಂದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸಲಾಯಿತು.
ಇದೇ ವೇಳೆ ಸ್ಯಾನಿಟರಿ ಪ್ಯಾಡ್ ಬಳಕೆ ಹಾಗೂ ಸ್ವಚ್ಚತೆಯ ಕುರಿತಾಗಿ ಅರಿವು ಮೂಡಿಸುವ ಕಾರ್ಯ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post