ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯ ಹಾವಳಿ ಅಬ್ಬರಿಸಿದ್ದು, ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿ ಎಂದು ವರದಿಯಾಗಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದಿನಿಂದಲೇ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗುತ್ತದೆಯೇ ಎಂಬ ಅತಂಕ ಮನೆ ಮಾಡಿದೆ.
Monsoon Forecast for Aug 18, 2018: #Flood in #Gujarat #Kerala; Heavy rain in Coastal #Karnataka #Konkan & #Goa @EtvGujaratiNews @Kerala_News @Newskarnataka pic.twitter.com/fz6uxiWXoL
— SkymetWeather (@SkymetWeather) August 17, 2018
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ನದಿ ಪಾತ್ರದ ಹಾಗೂ ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಇನ್ನು, ನಾಳೆ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆ ಆಗಲಿದ್ದು, ಆ.20 ಮತ್ತು 21 ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
Discussion about this post