ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಖ್ಯಾತ ವೈದ್ಯ ಡಾ.ಬಿ.ಎಂ. ಹೆಗ್ಡೆ ಅವರಿಗೆ ಪದ್ಮ ವಿಭೂಷಣ ಗೌರವವನ್ನು ನೀಡಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹೆಗ್ಡೆ ಅವರಿಗೆ ಪದ್ಮ ವಿಭೂಷಣ ದೊರೆತಿರುವುದು ಸಮಸ್ತ ಕನ್ನಡಿಗರು ಹೆಮ್ಮೆ ಪಡುವಂತಹ ದಿನ ಇದಾಗಿದೆ.
ಇನ್ನು, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆಗಾಗಿ ಖ್ಯಾತ ಬರಹಗಾರ ಡಾ.ಚಂದ್ರಶೇಖರ ಕಂಬಾರ ಮತ್ತು ರಂಗಸಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ಮಾತಾ ಬಿ. ಮಂಜಮ್ಮ ಜೋಗತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಅಂತೆಯೇ ಕ್ರೀಡಾ ಕ್ಷೇತ್ರದಲ್ಲಿ ಸೇವೆಗಾಗಿ ಕೆವೈ ವೆಂಕಟೇಶ್ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post