ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಇತ್ತ ದೇಶದಾದ್ಯಂತ ಇಂದು ನರಕ ಚತುರ್ದಶಿ ಆಚರಣೆ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದರೆ, ಅತ್ತ ಗಡಿಯಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದ ಎಲ್’ಒಸಿ ಬಳಿಯ ಗುರೇಜ್ ವಲಯದಿಂದ ಉರಿ ವಲಯದವರೆಗೂ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ, ಗುಂಡಿನ ದಾಳಿ ಹಾಗೂ ಮಾರ್ಟರ್ ಶೆಲ್ ದಾಳಿ ನಡೆಸಿದ್ದಾರೆ.
ಈ ವೇಳೆ ಭಾರೀ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಐವರು ಯೋಧರು ವೀರಸ್ವರ್ಗ ಸೇರಿದ್ದು, ಮೂವರು ನಾಗರಿಕರೂ ಸಹ ಬಲಿಯಾಗಿದ್ದಾರೆ.
ಈ ಕುರಿತಂತೆ ಸೇನಾಧಿಕಾರಿಗಳು ರಾಷ್ಟ್ರೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ದಾವರ್, ಕೆರನ್, ಉರಿ ಮತ್ತು ನೌಗಾಮ್ ಸೇರಿದಂತೆ ಹಲವು ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಕದನ ಉಲ್ಲಂಘನೆ ಮಾಡಿದೆ. ಮಾರ್ಟರ್ ಶೆಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಬಳಸಿ ಪಾಕಿಸ್ಥಾನ ಸೇನೆ ದಾಳಿ ನಡೆಸಿದೆ. ಉದ್ದೇಶಪೂರ್ವಕವಾಗಿ ಪಾಕಿಸ್ತಾನ ಪಡೆಗಳು ನಾಗರಿಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರೀಕರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.












Discussion about this post