ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಾಲಿ ಎದುರಿಸುತ್ತಿರುವ ನೈಟ್ ಲ್ಯಾಂಡಿಂಗ್ #NightLanding ಸಮಸ್ಯೆ ಪರಿಹಾರವಾದ ನಂತರ ಅಯೋಧ್ಯೆ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಹಾರಾಟ ಆರಂಭದ ಕುರಿತಾಗಿ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿರುವ ಅವರು, ಶಿವಮೊಗ್ಗ #Shivamogga ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆಯ ಕೆಲಸ ಆಗಬೇಕಿದೆ. ಹಾಲಿ, ವಿಸಿಬಲಿಟಿ ಸಮಸ್ಯೆ ಕಾಡುತ್ತಿದ್ದು, ಹಲವು ಬಾರಿ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ಹೀಗಾಗಿ, ಈ ಎಲ್ಲಾ ಸಮಸ್ಯೆಗಳು ಪರಿಹಾರವಾಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರ ಇವುಗಳನ್ನೆಲ್ಲಾ ಪರಿಹಾರ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದರು.
ಎಲ್ಲಾ ಸಮಸ್ಯೆಗಳೂ ಸಹ ಪರಿಹಾರವಾದ ನಂತರ ಅಯೋಧ್ಯೆ #Ayodhya ಸೇರಿದಂತೆ ದೇಶದ ವಿವಿಧ ನಗರಗಳಿಗೆ ವಿಮಾನ ಹಾರಾಟಕ್ಕೆ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















