ಬೆಂಗಳೂರು: ರಾಜ್ಯದ ಕೊಡಗಿನಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ತತ್ತರಿಸಿ ಸಂಕಷ್ಟದಲ್ಲಿರುವ ಜನರ ಬದುಕು ಕಟ್ಟಿಕೊಡಲು ಕೇಂದ್ರ ಸರ್ಕಾರ 100 ಕೋಟಿ ರೂ.ಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೇರಳ ರಾಜ್ಯಕ್ಕೆ ಪ್ರಧಾನಿಯವರು 500 ಕೋಟಿ ರೂ. ಪರಿಹಾರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 100 ಕೋಟಿ ರೂ. ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದು, ಇದನ್ನೇ ನಿರೀಕ್ಷೆ ಮಾಡಲಾಗಿದೆ ಎಂದಿದ್ದಾರೆ.
ಇನ್ನು, ಕೊಡಗಿನ ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ಸೇನೆ, ಎನ್‌ಡಿಆರ್‌ಎಫ್ ಸಹಾಯವನ್ನು ನಾವು ನಿರಂತರವಾಗಿ ಪಡೆದುಕೊಂಡಿದ್ದೇವೆ ಎಂದಿರುವ ಅವರು, ಹಾನಿಯಾಗಿರುವ ರಸ್ತೆಯಗಳ ದುರಸ್ಥಿ ಕಾರ್ಯ ಆರಂಭವಾಗಿದೆ. ಶೀಘ್ರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದ್ದಾರೆ.
Discussion about this post