ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮಡಿಕೇರಿಯಿಂದ #Madikeri ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫ್ಲೈಬಸ್ #Flybus ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.
Also Read>> ಚಿಕ್ಕಬಳ್ಳಾಪುರ | ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿಂದೂ ಹುಡುಗ-ಮುಸ್ಲಿಂ ಯುವತಿ
ಈ ಕುರಿತಂತೆ ಕೆಎಸ್’ಆರ್’ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಂ.ಎಂ. ಮೆಹಬೂಬ್ ಅಲಿ ಮಾಹಿತಿ ಪ್ರಕಟಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ.
ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್’ಆರ್’ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಫ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post