ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲಿದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಮೈಸೂರು ಮತ್ತು ವಿಭಾಗದ ಮುಖ್ಯಸ್ಥ ಡಾ ಸುನೀಲ್ ಕಾರಂತ್ ಅವರುಗಳ ತಂಡ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಇನ್ನು, ಇದೇ ವೇಳೆ ಎಸ್.ಎಂ. ಕೃಷ್ಣ ಕುಟುಂಬಸ್ಥರು ಸಂದೇಶ ನೀಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಸಮಸ್ಯೆಯಿಲ್ಲ. ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿದ ನಂತರ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಊಹಾಪೊಹದ ಮಾಹಿತಿಗಳಿಗೆ ಕಿವಿಗೊಡದಂತೆ ಕೃಷ್ಣ ಅವರ ಪರವಾಗಿ ಕೊರುತ್ತೇವೆ ಎಂದಿದ್ದಾರೆ.
ಕೃಷ್ಣ ಅವರ ಚಿಕಿತ್ಸೆ ಕುರಿತಾಗಿ ಖುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















