ಕಲಬುರಗಿ: ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆಬಿದ್ದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ರತ್ನಪ್ರಭಾ, ತತಕ್ಷಣದಿಂದಲೇ ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಾಗೂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.
ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿರುವ ರತ್ನಪ್ರಭಾ, ಪ್ರಧಾನಿ ನರೇಂದ್ರ ಮೋದಿ ಅವರು ವಿಶಿಷ್ಠ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತಿದ್ದು, ನಿವೃತ್ತಿ ಬಳಿಕ ಜನರ ಸೇವೆ ಮಾಡಲು ರಾಜಕೀಯವೇ ಉತ್ತಮ ಮಾರ್ಗ ಎಂದು ನಿರ್ಧರಿಸಿ, ಮೋದಿಯವರಿಗೆ ಪೂರಕವಾಗಿ ಸೇವೆ ಮಾಡಲು ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.
ಹೈದರಾಬಾದ್ ಮೂಲದ ಕೆ. ರತ್ನಪ್ರಭಾ ಅವರು 1981ರ ಬ್ಯಾಚ್’ನ ಐಎಎಸ್ ಅಧಿಕಾರಿಯಾಗಿದ್ದು, 2017ರ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ರಾಜ್ಯದ 3ನೆಯ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡರು.
2018ರ ಮಾರ್ಚ್‌ನಲ್ಲಿ ಅವರು ನಿವೃತ್ತರಾಗಬೇಕಿತ್ತು. ಆದರೆ, ಸರ್ಕಾರ ಅವರ ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿತ್ತು. 2018ರ ಜೂನ್‌ನಲ್ಲಿ ನಿವೃತ್ತರಾಗಿದ್ದಾರೆ.
ಬಿಜೆಪಿ ಸೇರುತ್ತಾರೆ ಎಂದು 2018ರ ಸೆಪ್ಟೆಂಬರ್’ನಲ್ಲೇ ಕಲ್ಪ ನ್ಯೂಸ್ ಹೇಳಿತ್ತು!
ಕೆ. ರತ್ನಪ್ರಭಾ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ನಂಬಲರ್ಹ ಮೂಲಗಳ ಮಾಹಿತಿಯನ್ನು ಆಧರಿಸಿ 2018ರ ಸೆಪ್ಟೆಂಬರ್’ನಲ್ಲೇ ಕಲ್ಪ ನ್ಯೂಸ್ ಸುದ್ದಿ ಪ್ರಕಟಿಸಿತ್ತು.
ಬಿಜೆಪಿ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧವಾಗಿ ರತ್ನಪ್ರಭಾ ಅವರನ್ನು ಕಣಕ್ಕಿಳಿಸಲಿದೆ ಎನ್ನಲಾಗಿತ್ತು. ಆದರೆ, ಲೋಕಸಭಾ ಚುನಾವಣೆಗೆ ಸ್ಪರ್ಧಿಸದೇ ಸದ್ಯ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.








Discussion about this post