ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು, ಸ್ಪರ್ಧಿಸಿ ಸೋತಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೈ ಪಕ್ಷ ಬಿಟ್ಟು ಬಿಜೆಪಿಗೆ ಘರ್ ವಾಪ್ಸಿ ಆಗಿದ್ದಾರೆ.
ನವದೆಹಲಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆ.ಪಿ. ನಡ್ಡಾ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ತಮ್ಮ ಮಾತೃ ಪಕ್ಷ ಬಿಜೆಪಿಗೆ ಮರಳಿ ಸೇರ್ಪಡೆಗೊಂಡರು.
ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದರು. ಬಿಜೆಪಿಗೆ ವಾಪಸ್ ಬರುವಂತೆ ಜಗದೀಶ್ ಶೆಟ್ಟರ್’ಗೆ ಯಡಿಯೂರಪ್ಪ ಅವರಿಗೆ ಆಹ್ವಾನ ಕೊಟ್ಟಿದ್ದರು. ವರಿಷ್ಠರನ್ನು ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು.
ನಾನು ಓಪನ್ ಆಗಿದ್ದೀನಿ. ಆದರೆ ಬಿಜೆಪಿಯ ನಂಬರ್ 1, 2 ಒಪ್ಪಿಗೆ ಕೊಟ್ಟು ಮಾತನಾಡಬೇಕು. ಮೋದಿ, ಅಮಿತ್ ಶಾ ಜೊತೆ ಮಾತಾನಾಡಿಸಬೇಕು. ಅಲ್ಲೇ ಮಾತುಕತೆ ಆಗಬೇಕು ಎಂದು ಶೆಟ್ಟರ್ ಹೇಳಿದ್ದರು. ಈ ಹಿನ್ನೆಲೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸರ್ಕಸ್ ನಡೆಸಿ ಮಾತುಕತೆಗೆ ಒಪ್ಪಿಸಿದ್ದರು.
ಅಂತಿಮವಾಗಿ ಮಾತುಕತೆ ಫಲಪ್ರದವಾಗಿದ್ದು, ಇಂದು ಕಾಂಗ್ರೆಸ್ ತೊರೆದು, ಬಿಜೆಪಿಗೆ ಮರಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















