ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರಸಭೆ ಮಾಜಿ ಸದಸ್ಯೆ ಉಮಾದೇವಿ(79) ಅವರು ಇಂದು ಮಧ್ಯಾಹ್ನ ನಿಧನರಾದರು.
ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ರಸ್ತೆಯ ನಿವಾಸಿಯಾಗಿದ್ದ ಇವರು, ವಯೋಸಹಜ ಅಸ್ವಸ್ಥತೆಯಿಂದ ಇಂದು ಕೊನೆಯುಸಿರೆಳೆದಿದ್ದಾರೆ.
ಬಿ.ಎಚ್. ರುದ್ರಪ್ಪ ಅವರ ಪತ್ನಿಯಾದ ಇವರು, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ವೀರಶೈವ ರುದ್ರ ಭೂಮಿಯಲ್ಲಿ ನಡೆಯಲಿದೆ.
ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಾಮಾಜಿಕ ಸೇವಾ ಕಾರ್ಯಕರ್ತ ಎಸ್. ನರಸಿಂಹಾಚಾರ್, ಪ್ರಮುಖರಾದ ವೆಂಕಟೇಶ್ ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post