ಬೆಂಗಳೂರು: ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ, ಆನಂತರ ಸಚಿವರಾಗಿದ್ದ ವಾಲ್ಮೀಕಿ ಸಮುದಾಯದ ನಾಯಕ ತಿಪ್ಪೇಸ್ವಾಮಿ(76) ಇಂದು ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ತಿಪ್ಪೇಸ್ವಾಮಿ ಅವರ ಪಾರ್ಥಿವ ಶರೀರವನ್ನು ಚಳ್ಳಕೆರೆ ತರಲಾಗುತ್ತಿದ್ದು, ಕಾಟಪ್ಪನ ಹಟ್ಟಿಯ ಅವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ತಿಪ್ಪೇಸ್ವಾಮಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿ ಎಚ್.ಡಿ. ದೇವೇಗೌಡ ಸಂಪುಟದಲ್ಲಿ ಅಬಕಾರಿ ಸಚಿವರಾಗಿ, ಜೆ.ಎಚ್. ಪಟೇಲ್ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು.
Discussion about this post